News Karnataka Kannada
Thursday, May 02 2024
ಮಂಡ್ಯ

ಮಂಡ್ಯದಲ್ಲಿ ಹೆಚ್.ಡಿ ಕುಮಾರಸ್ವಾಮಿ ಪರ ಅಬ್ಬರದ ಪ್ರಚಾರ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ  ಸ್ಪರ್ಧಿಸಿರುವ  ಹೆಚ್.ಡಿ ಕುಮಾರಸ್ವಾಮಿರವರ ಪರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಕುಮಾರಣ್ಣನ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ.
Photo Credit : NewsKarnataka

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ  ಸ್ಪರ್ಧಿಸಿರುವ  ಹೆಚ್.ಡಿ ಕುಮಾರಸ್ವಾಮಿರವರ ಪರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಕುಮಾರಣ್ಣನ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಕೆ.ಎಂ ದೊಡ್ಡಿ ಸಮೀಪದ  ತೊರೆಬೊಮ್ಮನಹಳ್ಳಿ, ಎಸ್ ಐ ಹೊನ್ನಲಗೆರೆ, ಮೆಣಸಗೆರೆ ಹಾಗೂ ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  ಮುಖಂಡರಾದ ಸಂತೋಷ್ ತಮ್ಮಣ್ಣ ಹಾಗೂ ಎಸ್.ಪಿ ಸ್ವಾಮಿ ನೇತೃತ್ವದಲ್ಲಿ ನೂರಾರು  ಕಾರ್ಯಕರ್ತರು ಅಬ್ಬರದ ಪ್ರಚಾರ ಮಾಡಿ ಕುಮಾರಸ್ವಾಮಿರವರ ಪರ ಮತಯಾಚನೆ ನಡೆಸಿದರು.

ಈ ವೇಳೆ ಮಾತನಾಡಿದ ಜೆಡಿಎಸ್ ಯುವ ಮುಖಂಡ ಸಂತೋಷ್ ತಮ್ಮಣ್ಣ  ಅವರು, ಈ ರಾಜ್ಯದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿರವರು ಈ ಬಾರಿ ಹೆಚ್ಚಿನ ಮತಗಳಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.  ಕಳೆದ ಎರಡು ಬಾರಿ ಮುಖ್ಯಮಂತ್ರಿಯಾಗಿ ಜನಪರ ,ರೈತಪರ  ಆಡಳಿತ ನೀಡಿ ರೈತರ ಸಾಲಮನ್ನಾ ಮಾಡಿ ರೈತಪರ ಸರ್ಕಾರವನ್ನು ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಮುಖಂಡ ಎಸ್.ಪಿ ಸ್ವಾಮಿ ಮಾತನಾಡಿ ಈ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು  ಮೂರನೇ ಬಾರಿಗೆ ಮತ್ತೊಮ್ಮೆ ದೇಶದ ಪ್ರಧಾನಿ ಮಾಡಲು ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರವರನ್ನು ಈ ಬಾರಿ ಹೆಚ್ಚಿನ ಮತಗಳನ್ನು ನೀಡಿ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಹೇಳಿದರು.

ಜೆಡಿಎಸ್ ಮುಖಂಡರಾದ ಗುರುಚರಣ್, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಬಿಜೆಪಿ ಘಟಕದ  ಅಧ್ಯಕ್ಷ ಸತೀಶ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ರಘುಗೌಡ, ಕರಡಕೆರೆ ಹನುಮಂತೇಗೌಡ, ಜೆಡಿಎಸ್ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ದಿವ್ಯಾ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಟಿ ಬಲ್ಲೆಗೌಡ, ಅಣ್ಣೂರು ನವೀನ್, ವಿನು, ಯೋಗೇಂದ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು