ಮಂಡ್ಯ: ತಡೆಗೋಡೆ ಇಲ್ಲದ ಕಾರಣ ಮಂಡ್ಯದ ವಿಸಿ ನಾಲೆಗೆ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಕಾರು ಬಿದ್ದಿದೆ. ಈ ವೇಳೆ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಮಂಡ್ಯದ ಅವ್ವೇರಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಾಲೆಗೆ ಶಿಫ್ಟ್ ಕಾರು ಉರುಳಿದೆ. ಇದರಿಂದ ಕಾರು ಸಂಪೂರ್ಣ ಜಖಂ ಆಗಿದೆ. ಈ ಪರಿಣಾಮ ಕಾರಿನಲ್ಲಿದ್ದ ಇಬ್ಬರ ಪೈಕಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.
ಗಾಯಗೊಂಡ ವ್ಯಕ್ತಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಮೃತ ಹಾಗೂ ಗಾಯಗೊಂಡ ವ್ಯಕ್ತಿಯ ವಿಳಾಸ ಇನ್ನೂ ಪತ್ತೆಯಾಗಿಲ್ಲ.