Categories: ಮಂಡ್ಯ

ಮಂಡ್ಯ ಬಳಿ ಕಾರು ಹಳ್ಳಕ್ಕೆ ಬಿದ್ದು ಮೂವರು ದುರ್ಮರಣ

ಮಂಡ್ಯ: ಕಾರು ಹಳ್ಳಕ್ಕೆ ಮಗುಚಿ ಬಿದ್ದ ಪರಿಣಾಮ ಪಟ್ಟಣದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೊಸ ಸೇತುವೆಯ ಸಮೀಪ ಶನಿವಾರ ರಾತ್ರಿ ನಡೆದಿದೆ.

ಅಕ್ಕಿಹೆಬ್ಬಾಳು ಗ್ರಾಮದ ಸ್ನೇಹಿತರ ಮನೆಯಿಂದ ಕೆ.ಆರ್.ಪೇಟೆ ಪಟ್ಟಣಕ್ಕೆ ನಾಲ್ವರು ಸ್ನೇಹಿತರು ಕಾರಿನಲ್ಲಿ ಆಗಮಿಸುತ್ತಿದ್ದರು. ಅಕ್ಕಿಹೆಬ್ಬಾಳು ಸೇತುವೆಗೆ ಸಮೀಪದಲ್ಲಿನ ತಿರುವಿನಲ್ಲಿ ವಾಹನ ನಿಯಂತ್ರಣ ತಪ್ಪಿದ ಪರಿಣಾಮ ಪಕ್ಕದ ಹಳ್ಳಕ್ಕೆ ಮಗುಚಿ ಬಿದ್ದಿದೆ. ಪರಿಣಾಮ ಪಟ್ಟಣದ ನಿವಾಸಿ ಚೇತನ್‌ಕುಮಾರ್ ಅವರ ಪುತ್ರ ಅನುಚ್ಛೇತ್(20) ಸೋಮಶೇಖರ್ ಪುತ್ರ ಪವನ್‌ಶೆಟ್ಟಿ(19) ಮತ್ತು ಸರ್ವೆಯರ್ ಅಶೋಕ್‌ಕುಮಾರ್ ಪುತ್ರ ಚಿರಂಜೀವಿ(20) ಮೃತ ದುರ್ದೈವಿಗಳಾಗಿದ್ದಾರೆ. ಇದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಜಯಕುಮಾರ್ ಪುತ್ರ ಸಾಗರ್ ಎಂಬ ಯುವಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸ್ ನಿರೀಕ್ಷಕ ಆನಂದ್‌ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಡರಾತ್ರಿ ನಡೆದ ಈ ಅಪಘಾತವನ್ನು ನೋಡಿದ ದಾರಿಹೋಕರು ಗಮನಿಸಿ ಸಂಬAಧಿಸಿದವರಿಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಮೃತ ದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ಯುವಕರ ಕುಟುಂಬದ ಸದಸ್ಯರ ಆಕ್ರಂದನ ಮುಗಿಲುಮುಟ್ಟುವಂತಿದ್ದು ತಮ್ಮ ಮುದ್ದಿನ ಮಕ್ಕಳ ಸಾವಿನಿಂದ ಕುಟುಂಬಗಳು ಕಂಗಾಲಾಗಿವೆ.

Gayathri SG

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

26 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

28 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

52 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago