News Karnataka Kannada
Saturday, April 27 2024
ಮಂಡ್ಯ

ಮಂಡ್ಯದಲ್ಲಿ ಜಾನುವಾರುಗಳಿಗೆ ಸಮಸ್ಯೆಯಾಗದಂತೆ ಕ್ರಮಕ್ಕೆ ಸೂಚನೆ

ರಾಜ್ಯ ಹಾಗೂ ಜಿಲ್ಲೆಗೆ ಬರ ಆವರಿಸಿದ್ದು, ಮುಂಬರುವ ದಿನಗಳಲ್ಲಿ ಬೇಸಿಗೆ ಬರಲಿರುವುದರಿಂದ. ಜಾನುವಾರುಗಳ ನೀರು ಮೇವು ಹಾಗೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ ಎಂದು ಶಾಸಕ ಪಿ.ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Photo Credit : By Author

ಮಂಡ್ಯ: ರಾಜ್ಯ ಹಾಗೂ ಜಿಲ್ಲೆಗೆ ಬರ ಆವರಿಸಿದ್ದು, ಮುಂಬರುವ ದಿನಗಳಲ್ಲಿ ಬೇಸಿಗೆ ಬರಲಿರುವುದರಿಂದ ಜಾನುವಾರುಗಳ ನೀರು ಮೇವು ಹಾಗೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ ಎಂದು ಶಾಸಕ ಪಿ.ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ 2023-24ನೇ ಸಾಲಿನ ಡಿಸೆಂಬರ್ 2023 ರ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಅವಶ್ಯಕ ನೀರು ಸೌಲಭ್ಯ ಕಾರ್ಯ ಕೈಗೆತ್ತಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಕ್ಕೆ ಅವಶ್ಯಕ ಟ್ಯಾಂಕರ್‌ಗಳ ಮೂಲಕ ನೀರು ಕೊಡಬೇಕು. ಜೊತೆಗೆ ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಸಮಸ್ಯೆ ಕಂಡುಬರದ ರೀತಿಯಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸಿ ಎಂದು ನಿರ್ದೇಶನ ನೀಡಿದರು.

ಜಾನುವಾರುಗಳು ಆಕಸ್ಮಿಕವಾಗಿ ಅಥವಾ ರೋಗ ರುಜುನುಗಳಿಂದ ಮೃತಪಟ್ಟರೆ ಸರ್ಕಾರದಿಂದ ನೀಡುವ ಪರಿಹಾರವನ್ನು ತಲುಪಿಸಿ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವಾಗಲಿ. ಗ್ರಾಮಗಳ ಡೈರಿ ಹಾಗೂ ಪಂಚಾಯತ ವ್ಯಾಪ್ತಿಯಲ್ಲಿ ಬ್ಯಾನರ್ ಅಳವಡಿಸಿ ಅರಿವು ಮೂಡಿಸಬೇಕು. ಮಂಡ್ಯ ತಾಲೂಕು ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿ. ಆರೋಗ್ಯ ಇಲಾಖೆಯಿಂದ ಕೋವಿಡ್ ಬಗ್ಗೆ ಜಾಗೃತಿ, ಗರ್ಭಿಣಿಯರಿಗೆ ಕಿಟ್ ವಿತರಣೆ, ಮಕ್ಕಳಿಗೆ ಚುಚ್ಚು ಮದ್ದು ಸೇರಿದಂತೆ ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದರು.

ಕಳೆದ ಬಾರಿ ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಮಂಡ್ಯ ತಾಲ್ಲೂಕು ಪ್ರಥಮ ಸ್ಥಾನದಲ್ಲಿದೆ. ಈ ಬಾರಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಬರುವ ನಿಟ್ಟಿನಲ್ಲಿ ಮಕ್ಕಳನ್ನು ಸಿದ್ಧಗೊಳಿಸಿ . ಮಕ್ಕಳಿಗೆ ಪರೀಕ್ಷಾ ಭಯ ಹೋಗಲಾಡಿಸುವುದು ಸೇರಿದಂತೆ ವ್ಯಕ್ತಿತ್ವ ವಿಕಸನದ ತರಬೇತಿ ನೀಡಿ ಎಂದು ಸೂಚಿಸಿದರಲ್ಲದೆ, ನರೇಗಾ ಯೋಜನಯಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ. ಜೊತೆಗೆ ಕೃಷಿ ಹೊಂಡ, ಎರೆಹುಳು ತೊಟ್ಟಿ ಯೋಜನೆ ಸೇರಿದಂತೆ ನರೇಗಾ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಎಂದರು.

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್ ಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಿ, ಮಕ್ಕಳಿಗೆ ಪೌಷ್ಟಿಕ ಅಹಾರ ನೀಡಿ, ಜೊತೆಗೆ ಅಧಿಕಾರಿಗಳು ಹಾಸ್ಟೆಲ್ ದಿಢೀರ್ ಭೇಟಿ ನೀಡಿ ಕುಂದು ಕೊರತೆ ಆಲಿಸಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದರ, ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು