News Karnataka Kannada
Monday, May 20 2024
ಮಂಡ್ಯ

ಕಾಂಗ್ರೆಸ್ ಅಭ್ಯರ್ಥಿಯ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್

D Boss
Photo Credit : NewsKarnataka

ಮಂಡ್ಯ: ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಅಭ್ಯರ್ಥಿಗಳ ಪರವಾಗಿ ಸಿನಿಮಾ ನಟ-ನಟಿಯರು ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಟ ದರ್ಶನ್ ಇಂದು ಚುನಾವಣಾ ಪ್ರಚಾರಕ್ಕೆ ಇಳಿದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಈ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಪರವಾಗಿ ಪ್ರಚಾರ ಮಾಡಿ, ತಾನು ಸುಮಲತಾ ಅವರ ಎರಡನೇ ಮಗ ಇದ್ದಂತೆ ಎಂದು ಹೇಳಿದ್ದರು.

ಅಮ್ಮನ ನಿರ್ಧಾರಕ್ಕೆ ನಮ್ಮ ಬೆಂಬಲ ಎಂದಿದ್ದರು. ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾಗೆ ಈ ಬಾರಿ ಟಿಕೆಟ್ ಕೈತಪ್ಪಿದೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಈ ನಡುವೆ ಬಿಜೆಪಿ ಸೇರಿದ್ದ ಸುಮಲತಾ, ಪಕ್ಷ ಹೇಳಿದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಹೇಳಿದ್ದರು. ಆದರೆ ಈವರೆಗೂ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಮಂಡ್ಯದಲ್ಲಿ ಪ್ರಚಾರ ನಡೆಸಿಲ್ಲ.

ಈ ಬೆಳವಣಿಗೆಗಳ ನಡುವೆ ಇಂದು ನಟ ದರ್ಶನ್ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮೈತ್ರಿ ಅಭ್ಯರ್ಥಿಯ ಪರವಾಗಿ ದರ್ಶನ್ ಪ್ರಚಾರ ನಡೆಸುವ ನಿರೀಕ್ಷೆ ಇತ್ತು. ಆದರೆ ಈಗ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣೆ ಪ್ರಚಾರಕ್ಕೆ ಇಳಿದಿರುವುದು ಅಚ್ಚರಿಗೆ ಕಾರಣವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು