News Karnataka Kannada
Tuesday, April 30 2024
ಮಂಡ್ಯ

ಮಂಡ್ಯದಲ್ಲಿ ಸಿಎಂ ಕಾರ್ಯಕ್ರಮದ ಸಿದ್ಧತೆಗೆ ಡಿಸಿ ಸೂಚನೆ

DC instructs to prepare for CM's programme in Mandya
Photo Credit : By Author

ಮಂಡ್ಯ: ಜಿಲ್ಲೆಯಲ್ಲಿ ಜೀವನೋಪಾಯ ವ? ಆಚರಣೆಯ ಉದ್ಘಾಟನಾ ಸಮಾರಂಭವು ಆ.11ರಂದು ನಗರದ ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್‌ನ ಕಾವೇರಿ ಸಭಾಂಗಣದಲ್ಲಿ ಮಾನ್ಯ ಮುಖ್ಯ ಮಂತ್ರಿಗಳ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ವಾಹನಗಳಿಗೆ ಪಾಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಆಹಾರ,ವೇದಿಕೆ, ಶೌಚಾಲಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಲು ವ್ಯವಸ್ಥೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಮಂಡ್ಯ ಜಿಲ್ಲೆಯಲ್ಲಿ 11,679 ಸ್ವಸಹಾಯ ಸಂಘಗಳು, 233 ಒಕ್ಕೂಟಗಳನ್ನು ರಚಿಸಲಾಗಿದೆ. ಒಟ್ಟಾರೆಯಾಗಿ 1,62,392 ಸದಸ್ಯರಿದ್ದು, ಅವರಿಗೆ ಪ್ರೋತ್ಸಾಹ ನೀಡಿ ಆರ್ಥಿಕವಾಗಿ ಸದೃಢ ಮಾಡಲು ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಿ ಎಂಬ ಉದ್ದೇಶದಿಂದ ಜೀವನೋಪಾಯ ವರ್ಷ ಆಚರಿಸಲಾಗುತ್ತಿದೆ.

ಎನ್.ಆರ್.ಎಲ್.ಎಂ. ಮತ್ತು ಎನ್.ಯು.ಎಲ್.ಎಂ ವತಿಯಿಂದ ಜೀವನೋಪಾಯ ವ? ಕಾರ್ಯಕ್ರಮಕ್ಕೆ ಚಾಲನೆ ನೀಡಿ ಉದ್ಯೋಗ ಕಲ್ಪಿಸಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಮೂಲ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯನಿರ್ವಾಹಕ ಅಧಿಕಾರಿಗಳನ್ನೊಳಗೊಂಡಂತಹ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ಕಾರ್ಯಕ್ರಮಕ್ಕೆ ಸ್ವ ಸಹಾಯ ಸಂಘದ ಮಹಿಳೆಯರನ್ನು ಕರೆತರಲು ವ್ಯವಸ್ಥಿತವಾಗಿ ಕ್ರಮವಹಿಸಿ ಎಂದರು.

ವಿಜೃಂಬಣೆಯ ಶ್ರೀರಂಗಪಟ್ಟಣ ದಸರಾ: ಈ ಬಾರಿ ಶ್ರೀರಂಗಪಟ್ಟಣ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2022 ರ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೆಪ್ಟಂಬರ್ ಕೊನೆಯ ವಾರದಲ್ಲಿ ಈ ಬಾರಿ 7 ದಿನಗಳ ಕಾಲ ಆಚರಿಸಲು ಉದ್ದೇಶಿಸಲಾಗಿದೆ ಎಂದರು.

ಮಕ್ಕಳ ದಸರಾ, ಮಹಿಳಾ ದಸರಾ, ಯೋಗ ದಸರಾ, ರೈತ ದಸರಾ, ಕ್ರೀಡಾ ದಸರಾ, ಯುವ ದಸರಾ, ಉದ್ಯೋಗ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅಧಿಕಾರಿಗಳು ವಿನೂತನವಾಗಿ ಕಾರ್ಯಕ್ರಮ ಆಯೋಜಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಎಂದರು.

ಹಾಲು ಕರೆಯುವ ಸ್ಪರ್ಧೆ, ಕಬ್ಬಡಿ, ಖೋಖೋ, ಚೆಸ್, ವಾಲಿಬಾಲ್, ವಾಟರ್ ಸ್ಪೋರ್ಟ್ಸ್, ವಿಚಾರ ಗೋಷ್ಠಿಗಳು, ಕವಿಗೋಷ್ಠಿ ವಿಶೇಷವಾಗಿ ದೀಪಾಲಂಕಾರ, ಕೆ.ಆರ್.ಎಸ್. ಬೋಟಿಂಗ್, ಟೂರಿಸಂ ಮ್ಯಾಪ್, ಶೈಕ್ಷಣಿಕ ಪೂಜಾ ಕುಣಿತ ಸೇರಿದಂತೆ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬಹುದು. ಅರ್ಥಪೂರ್ಣವಾಗಿ ಆಚರಿಸಲು ಕ್ರಮವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್.ನಾಗರಾಜು, ಜಿ.ಪಂ. ಸಿಇಒ ಶಾಂತ ಎಂ.ಹುಲ್ಮನಿ, ಪೊಲೀಸ್ ವರಿ?ಧಿಕಾರಿ ಎನ್.ಯತೀಶ್, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ವೇಣುಗೋಪಾಲ್, ಯೋಜನಾಧಿಕಾರಿ ತು?ರಮಣಿ, ಜಿಲ್ಲಾಧಿಕಾರಿಗಳ ಕಛೇರಿಯ ಹಿರಿಯ ಸಹಾಯಕರಾದ ಸ್ವಾಮಿಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು