ಮಂಡ್ಯ

ಮಂಡ್ಯದಲ್ಲಿ ‘ದಂತ ಆರೋಗ್ಯ ಹಳ್ಳಿಯ ಕಡೆಗೆ’ ಕಾರ್ಯಕ್ರಮ

ಮಂಡ್ಯ: ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ದಂತ ಆರೋಗ್ಯ ಹಳ್ಳಿಯ ಕಡೆಗೆ ಎಂಬ ಶೀರ್ಷಿಕೆ ಅಡಿಯಲ್ಲಿ ಗ್ರಾಮಗಳಲ್ಲಿ  ಮುಗುಳ್ನಗೆಯ ಸಿಂಚನ ಕಾರ್ಯಕ್ರಮವು ಆರಂಭಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಎಲ್ಲಾ ಜನರು ಇದರ ಸದುಪಯೋಗ ಪಡೆಯಿರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಗ್ರಾಮ, ಹಳ್ಳಿಗಳಲ್ಲಿ ಜನಸಾಮಾನ್ಯರಿಗೆ ದಂತ ಚಿಕಿತ್ಸೆ ಪಡೆಯಲು ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ರಾಜ್ಯದಲ್ಲೇ  ಪ್ರಥಮ ಬಾರಿಗೆ ಆರೋಗ್ಯ ಇಲಾಖೆಯಿಂದ ಗ್ರಾಮಗಳಲ್ಲಿ ಮುಗಳ್ನಗೆಯ ಸಿಂಚನ ಯೋಜನೆ ಪ್ರಾರಂಭಿಸಿದ್ದು, ಅವರು  ಶುಕ್ರವಾರ ಮಿಮ್ಸ್ ಆಡಿಟೋರಿಯಂನಲ್ಲಿ ಚಾಲನೆ ನೀಡಿ ಮಾತನಾಡಿದರು.

ದಂತ ಚಿಕಿತ್ಸೆಗೆ ಬಳಸುವ ಯಂತ್ರಗಳು ದುಬಾರಿಯಾಗಿದ್ದು, ಚಿಕಿತ್ಸಾ ವೆಚ್ಚವು ದುಬಾರಿಯಾಗಿರುತ್ತದೆ. ಈ  ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಜನರು ದಂತ ಸಂಬಂಧಿ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಹಿಂದೇಟು ಹಾಕುತ್ತಾರೆ.

ತಾಲೂಕಿನ ಪ್ರತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲೆ, ಶಿಬಿರಗಳಿಗೆ ಸಂಚಾರಿಸಿ ತಜ್ಞ ದಂತ ವೈದ್ಯರು  ಸಿಬ್ಬಂದಿಗಳು ಉಚಿತವಾಗಿ ಸ್ಥಳದಲ್ಲೇ ಕೆಲವು ಸರ್ವೇ ಸಾಮಾನ್ಯ ಬಾಯಿ ದಂತ ಕಾಯಿಲೆಗೆ ಚಿಕಿತ್ಸೆ ನೀಡಲಿದ್ದಾರೆ ಎಂದರು.

ಗ್ರಾಮಗಳಲ್ಲಿ ಮುಗುಳ್ನಗೆಯ ಸಿಂಚನ ಕಾರ್ಯಕ್ರಮವು ಯಶಸ್ವಿಯಾಗಲೆಂದು ಹಾರೈಸಿದರು. ಆರೋಗ್ಯ ಇಲಾಖೆಗೆ ಹಾಗೂ ಎಲ್ಲಾ ವೈದ್ಯರಿಗೆ ಅಭಿನಂದನೆಗಳನ್ನು ತಿಳಿಸಿದರು.

ಬಾಯಿ ದಂತ ತಪಾಸಣೆ ಹಾಗೂ ಸಲಹೆ, ಬಾಯಿ ಕ್ಯಾನ್ಸರ್ ಸ್ಕ್ರೀನಿಂಗ್, ಹಲ್ಲು ಕೀಳುವುದು, ಹಲ್ಲು ತುಂಬಿಸುವುದು, ಬಾಯಿ ಮುಖಗಳ ಗಾಯ ಸ್ವಚ್ಛಗೊಳಿಸುವುದು, ಪ್ಲ್ಯೂರೋಸಿಸ್ ತಪಾಸಣೆ ಹಾಗೂ ಚಿಕಿತ್ಸೆ, ದಂತ ಸ್ವಚ್ಛತೆ  ಮಾಡಲಾಗುವು ದು.

ದಂತ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಉಚಿತ ದಂತ ಪಂಕ್ತಿಗಾಗಿ ಸ್ಥಳದಲ್ಲೇ ರೆಫರಲ್ ಕಾರ್ಡ್ ನೀಡುವುದು  ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗುವುದು. ಜಿಲ್ಲೆಯ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಇಲಾಖೆಯಲ್ಲಿ ಸುಮಾರು18 ದಂತ ಆರೋಗ್ಯ ವೈದ್ಯಾಧಿಕಾರಿಗಳಿದ್ದು  ತಮ್ಮ ತಮ್ಮ ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಳನ್ನು ಸಾರ್ವಜನಿಕರಿಗೆ ಈಗಾಗಲೇ ನೀಡುತ್ತಿದ್ದಾರೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್ ಮಾತನಾಡಿ, ಬಾಯಿ ದಂತ ಸಂಬಂಧವಿರುವ ಅನೇಕ ಮೂಢನಂಬಿಕೆಗಳಾದ  ಹಲ್ಲು ಕಿತ್ತರೆ ಕಣ್ಣು ಕಾಣುವುದಿಲ್ಲ ಮಂಜಾಗುವುದು, ದಂತ ಸ್ವಚ್ಛಗೊಳಿಸಿದರೆ ಹಲ್ಲು ಸಡಿಲವಾಗುತ್ತದೆ, ದಂತಕ್ಷಯದಲ್ಲಿ ಹುಳು ಹರಿದಾಡುತ್ತದೆ ಎಂಬ ತಪ್ಪು ತಿಳುವಳಿಕೆಗಳಿವೆ ಎಂದರು.

ಬಾಯಿ ಅನಾರೋಗ್ಯದಿಂದ ಹೃದಯ ಸಂಬಂಧಿ, ಉಸಿರಾಟದ ಸಂಬಂಧಿ ಕಾಯಿಲೆಗಳು ಸ್ಟ್ರೋಕ್, ಡೈಮೇನ್ಸಿಯ, ಅಪೌಷ್ಟಿಕತೆ, ಅಜೀರ್ಣ ಇತ್ಯಾದಿಗಳು ಕಾಣಿಸಿಕೊಳ್ಳುವ ಕಾರಣ ಶಾಲಾ ಮಕ್ಕಳು, ಸಾರ್ವಜನಿಕರು ಹಾಗೂ ವಿಶೇಷವಾಗಿ ಗರ್ಭಿಣಿ ಬಾಣಂತಿಯರಲ್ಲಿ ಜಾಗೃತಿ ಅರಿವು ಮೂಡಿಸುವುದು ಸಂಚಾರಿ ಬಾಯಿದಂತ ಆರೋಗ್ಯ ಸೇವೆಯ ಸದುದ್ದೇಶವಾಗಿದೆ ಎಂದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago