ಮಂಡ್ಯ: ಮದ್ದೂರು ಪಟ್ಟಣದ ಶಿಂಷಾ ನದಿ ಬಳಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ಈ ಅಪಘಾತದಲ್ಲಿ ಶಂಕರ್ ಹಾಗೂ ಮಹದೇವು ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೋರ್ವನಿಗೆ ಗಂಭೀರ ಗಾಯವಾಗಿದ್ದು, ಮಂಡ್ಯ ಮಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಇವರು ಮೂವರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸದ ಮುಗಿಸಿ ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಶಿಂಷಾ ನದಿ ಸೇತುವೆ ಮೇಲೆಯೇ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕ್ಯಾಮೆರಾ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೈಸೂರು ಕಡೆಗೆ ಹೋಗುವ ರಸ್ತೆಗೆ ಹೋಗಿ ಕಾರು ಮಗುಚಿ ಬಿದ್ದಿದೆ.
ಈ ಪ್ರಕರಣ ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.