News Karnataka Kannada
Tuesday, April 30 2024
ಮಂಡ್ಯ

30 ನಿಮಿಷದಲ್ಲಿ 10 ಮುದ್ದೆ ತಿಂದ ಹುರಿಮೀಸೆಯ ಅಜ್ಜ

Grandfather eats 10 lumps in 30 minutes
Photo Credit : News Kannada

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿ  ಸಿರಿಧಾನ್ಯ ಹಬ್ಬದ ಅಂಗವಾಗಿ ನಾಟಿಕೋಳಿ ಸಾರು ರಾಗಿಮುದ್ದೆ ತಿನ್ನುವ ಸ್ಪರ್ಧೆ ನಡೆಯಿತು.

ಈ ಸ್ಪರ್ಧೆಯಲ್ಲಿ ಅರಕೆರೆಯ 62 ವರ್ಷ ಪ್ರಾಯದ ಈರೇಗೌಡ ಅವರು ಬರೋಬ್ಬರಿ 2.7 ಕೆ.ಜಿ. ತೂಕದ ಮುದ್ದೆ ತಿನ್ನುವ ಮೂಲಕ ಮೊದಲ ಸ್ಥಾನ ಗಿಟ್ಟಿಸಿಕೊಂಡರು.

ಹುರಿಮೀಸೆಯ ಸರದಾರ ಈರೇಗೌಡ ಎಲ್ಲರಿಗಿಂತ ಮುಂದಾಗಿ ಮುದ್ದೆ ಮುರಿಯುತ್ತ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡರು. ನಿಗದಿತ ಸಮಯದಲ್ಲಿ ಬರೋಬ್ಬರಿ 10 ಮುದ್ದೆ ಉಂಡು ಸೈ ಎನಿಸಿಕೊಳ್ಳುವ ಮೂಲಕ ಪ್ರಶಸ್ತಿಗೆ ಕೊರಳೊಡ್ಡಿದರು.

ಅರಕೆರೆಯ ಮತ್ತೊಬ್ಬ ಸ್ಪರ್ಧಿ ದಿಲೀಪ್‌ ಅವರು ಈರೇಗೌಡ ಅವರಿಗೆ ಪೈಪೋಟಿ ನೀಡಿದ್ದು, 1.682 ಕೆ.ಜಿ. ಮುದ್ದೆ ಸವಿದು ಎರಡನೇ ಸ್ಥಾನ ತಮ್ಮದಾಗಿಸಿಕೊಂಡರು. ಟಿ.ಎಂ. ಹೊಸೂರು ನಿವಾಸಿ ರವೀಂದ್ರ 1.544 ಕೆ.ಜಿ. ಮುದ್ದೆ ತಿನ್ನುವ ಮೂಲಕ ತೃತೀಯ ಸ್ಥಾನ ಪಡೆದರು.

ಸ್ಪರ್ಧಿಗಳಿಗೆ ಮುದ್ದೆ ತಿನ್ನಲು 30 ನಿಮಿಷಗಳ ಕಾಲಾವಕಾಶ ನೀಡಲಾಯಿತು. ಪ್ರತಿ ಮುದ್ದೆಯನ್ನೂ ತೂಕ ಹಾಕಿ ಬಡಿಸಲಾಯಿತು. ಅದರೊಟ್ಟಿಗೆ ಬಿಸಿ ನಾಟಿಕೋಳಿ ಸಾರು, ನೆಂಚಿಕೊಳ್ಳಲು ನಾಟಿ ಕೋಳಿಯ ಮಾಂಸ ಹಾಗೂ ಮೊಟ್ಟೆ ನೀಡಲಾಯಿತು. ಹತ್ತು ಸ್ಪರ್ಧಿಗಳು ಉತ್ಸಾಹದಿಂದ ಮುದ್ದೆ ಮುರಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು