News Karnataka Kannada
Saturday, May 04 2024
ಮಂಡ್ಯ

ಹನುಮಧ್ವಜ ತೆರವು ಪ್ರಕರಣ: ಫೆ. 9ರಂದು ಮಂಡ್ಯ ಬಂದ್

ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜ ತೆರವುಗೊಳಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಫೆಬ್ರವರಿ 9ರಂದು ಮಂಡ್ಯ ಬಂದ್'ಗೆ ಕರೆ ನೀಡಲಾಗಿದೆ.
Photo Credit : News Kannada

ಮಂಡ್ಯ:  ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜ ತೆರವುಗೊಳಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಫೆಬ್ರವರಿ 9ರಂದು ಮಂಡ್ಯ ಬಂದ್’ಗೆ ಕರೆ ನೀಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಮುಖಂಡ ಎಂ.ಬಿ.ನಾಗಣ್ಣಗೌಡ ಅವರು, ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಜಿಲ್ಲೆಯ ಹೋರಾಟ ಪರಂಪರೆಗೆ ಮಸಿ ಬಳಿಯುವ ಪ್ರಯತ್ನ ನಡೆದಿದೆ. ಸಮಾನ ಮನಸ್ಕ ವೇದಿಕೆಯಡಿ ವಿವಿಧ ಸಂಘಟನೆಗಳು ಒಗ್ಗೂಡಿ ಮಂಡ್ಯ ನಗರ ಬಂದ್‌ ಮಾಡಲಾಗುವುದು ಎಂದು ಹೇಳಿದರು.

ಕಾನೂನು ಮುರಿಯುವ, ಶಾಂತಿ ಕದಡುವ ಶಕ್ತಿಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಪಾದಯಾತ್ರೆ ನೆಪದಲ್ಲಿ ಕುರುಬ ಸಮುದಾಯದ ವಿದ್ಯಾರ್ಥಿ ನಿಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಬೇಕು. ಜಾತ್ಯತೀತ ತತ್ವ, ಶಾಂತಿ, ಸೌಹಾರ್ದ ಬಯಸುವ ಸಂಘಟನೆಗಳ ಮುಖಂಡರು ಸಾರ್ವಜನಿಕರು ಬಂದ್‌ನಲ್ಲಿ ಭಾಗವಹಿಸಲಿದ್ದಾರೆ’ ಎಂದರು.

ಜನರ ಶಾಂತಿ ಮತ್ತು ನೆಮ್ಮದಿ ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು