News Karnataka Kannada
Monday, April 29 2024
ಮಂಡ್ಯ

ಚುನಾವಣೆ ಬಂದ್ರೆ ಮೂರೇ ದಿನದಲ್ಲಿ ಹಾರ್ಟ್ ಆಪರೇಷನ್ ಆಗಿ ಇಡೀ ರಾಜ್ಯ ಸುತ್ತಾಟ : ಬಂಡೀಸಿದ್ದೇಗೌಡ

ಮಾಜಿ ಸಿಎಂ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹೆಚ್‌.ಡಿ.ಕುಮಾರಸ್ವಾಮಿ ಅವರ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಕಾಂಗ್ರೆಸ್‌ ಶಾಸಕ ರಮೇಶ್‌ ಬಂಡೀಸಿದ್ದೇಗೌಡ ಅನುಮಾನ ವ್ಯಕ್ತಪಡಿಸಿದ್ದು, ಮಳವಳ್ಳಿಯ ಕಾಂಗ್ರೆಸ್‌ ಸಭೆಯಲ್ಲಿ ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಕುರಿತು ಮಾತನಾಡಿದ ಅವರು, ಚುನಾವಣೆ ಬಂತು ಎಂದರೇ ಸಾಕು ಆಸ್ಪತ್ರೆ ಸೇರ್ತಾರೆ. ಮೂರೇ ದಿನದಲ್ಲಿ ಹಾರ್ಟ್ ಆಪರೇಷನ್ ಆಗುತ್ತೆ. ನಾಲ್ಕನೇ ದಿನಕ್ಕೆ ಇಡೀ ರಾಜ್ಯ ಸುತ್ತುತ್ತಾರೆ. ಅದು ಹೇಗೆ ಸಾಧ್ಯ ಅನ್ನೋದು ನನಗೆ ಅರ್ಥವಾಗುತ್ತಿಲ್ಲ ಎಂದು ಪ್ರಶ್ನಿಸಿದರು.
Photo Credit : NewsKarnataka

ಮಂಡ್ಯ: ಮಾಜಿ ಸಿಎಂ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹೆಚ್‌.ಡಿ.ಕುಮಾರಸ್ವಾಮಿ ಅವರ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಕಾಂಗ್ರೆಸ್‌ ಶಾಸಕ ರಮೇಶ್‌ ಬಂಡೀಸಿದ್ದೇಗೌಡ ಅನುಮಾನ ವ್ಯಕ್ತಪಡಿಸಿದ್ದು, ಮಳವಳ್ಳಿಯ ಕಾಂಗ್ರೆಸ್‌ ಸಭೆಯಲ್ಲಿ ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಕುರಿತು ಮಾತನಾಡಿದ ಅವರು, ಚುನಾವಣೆ ಬಂತು ಎಂದರೇ ಸಾಕು ಆಸ್ಪತ್ರೆ ಸೇರ್ತಾರೆ. ಮೂರೇ ದಿನದಲ್ಲಿ ಹಾರ್ಟ್ ಆಪರೇಷನ್ ಆಗುತ್ತೆ. ನಾಲ್ಕನೇ ದಿನಕ್ಕೆ ಇಡೀ ರಾಜ್ಯ ಸುತ್ತುತ್ತಾರೆ. ಅದು ಹೇಗೆ ಸಾಧ್ಯ ಅನ್ನೋದು ನನಗೆ ಅರ್ಥವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಚಲುವರಾಯಸ್ವಾಮಿಗೆ ಇರುವ ಕಾಯಿಲೆ ಅವರ ಸ್ನೇಹಿತ ಕುಮಾರಸ್ವಾಮಿಯವರಿಗೆ ಇದೆ. ಚಲುವರಾಯಸ್ವಾಮಿ ಆಸ್ಪತ್ರೆ ಸೇರಿದದೆ ಒಂದು ತಿಂಗಳು ಈಚೆಗೆ ಬರಲ್ಲ. ಅದು ಹೇಗೆ ಹಾರ್ಟ್ ಆಪರೇಷನ್ ಮಾಡಿಸಿ 2 ದಿನಕ್ಕೆ ಆಚೆ ಬರುತ್ತಾರೆ ಎಂದು ಕೇಳಿದರು.

ಈ ಚುನಾವಣೆ ಅಭಿವೃದ್ದಿ ವರ್ಸಸ್ ಕಣ್ಣೀರಿಡುವ ಜನರ ನಡುವಿನ ಚುನಾವಣೆ. ನನಗೆ ಆ ತೊಂದರೆ ಇದೆ, ಈ ತೊಂದರೆ ಇದೆ ಎಂದರೆ ಕೇಳಬೇಡಿ. ಅಧಿಕಾರದಲ್ಲಿ ಇದ್ದಾಗ ಏನ್ ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿಗೆ ಅತಿ ಹೆಚ್ಚು ಮತ ಕೊಟ್ಟು ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು