Categories: ಮಂಡ್ಯ

ಬರಿದಾಗುತ್ತಿರುವ ಹೇಮಾವತಿಯ ನದಿ ಒಡಲು: ನೀರಿನ ಸಮಸ್ಯೆ ಎದುರಾಗುವ ಲಕ್ಷಣ

ಕೆ.ಆರ್.ಪೇಟೆ: ಬರದ ಛಾಯೆ ಹೆಚ್ಚಾಗುತ್ತಿದ್ದು, ಪರಿಣಾಮ ತಾಲೂಕಿನಾದ್ಯಂತ ಕೆರೆ- ಕಟ್ಟೆಗಳು ಒಣಗಿ ನಿಂತಿದ್ದು ತಾಲೂಕಿನಲ್ಲಿ ಹಾದು ಹೋಗಿರುವ ಜೀವನದಿ ಹೇಮಾವತಿಯ ಒಡಲು ಬರಿದಾಗುತ್ತಿದೆ. ಇದರಿಂದಾಗಿ ಕೆ.ಆರ್.ಪೇಟೆ ಪಟ್ಟಣದ ಜನಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣ ಕಂಡು ಬಂದಿದೆ.

ಕೆ.ಆರ್.ಪೇಟೆ ಪಟ್ಟಣದ ಪುರಸಭೆ ವ್ಯಾಪ್ತಿಯ 23ವಾರ್ಡುಗಳ 30 ಸಾವಿರ ಜನರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಶುದ್ಧ ಕುಡಿಯುವ ನೀರಿನ ಮೂಲದ ತಾಣವಾಗಿರುವ ಹೇಮಾವತಿ ನದಿಯಲ್ಲಿ ನೀರಿನ ಹರಿವು  ಕಡಿಮೆಯಾಗಿದೆ. ಇದರಿಂದ ಹೇಮಾವತಿ ನದಿಯಿಂದ ನೀರೆತ್ತುವ ಜಾಕ್‌ ವೆಲ್ ಇರುವ ಹೇಮಗಿರಿ ಬೆಟ್ಟದ ಪಾದದ ಬಳಿ ಹೇಮಾವತಿ ನದಿಯ ನೀರು ಅಶುದ್ಧಗೊಂಡು ಪಾಚಿಗಟ್ಟಿ ನಿಂತಿದ್ದು ನದಿಯಲ್ಲಿ ಕೇವಲ ಎರಡರಿಂದ ಮೂರು ಅಡಿಗಳಷ್ಟು ಮಾತ್ರ ನೀರಿದ್ದು, ನದಿಯೊಳಗಿನ ಕಲ್ಲು ಕಾಣುವಂತಾಗಿದೆ.

ಪಟ್ಟಣಕ್ಕೆ ಕೇವಲ ಎಂಟು ಕಿ.ಮೀ ದೂರದಲ್ಲಿ ಹೇಮಗಿರಿ ಬೆಟ್ಟದ ತಪ್ಪಲಿನಲ್ಲಿ ಹಾದು ಹೋಗಿರುವ ಜೀವನದಿ ಹೇಮಾವತಿ ನದಿಯಿಂದ ಪೈಪ್‌ಲೈನ್ ಮೂಲಕ ಕುಡಿಯುವ ನೀರನ್ನು ಪಟ್ಟಣಕ್ಕೆ ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ  ಬೆಟ್ಟದ ತಪ್ಪಲಿನಲ್ಲಿ ಕುಪ್ಪಳ್ಳಿಯ ಭಾಗದಲ್ಲಿ ನದಿಯ ಒಡಲಿನಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಜಾಕ್‌ವೆಲ್ ನಿರ್ಮಿಸಲಾಗಿದೆ. ನದಿಯಲ್ಲಿ ನೀರು ಖಾಲಿಯಾಗಿರುವುದರಿಂದ ಜಾಕ್‌ವೆಲ್ ನೀರಿನಿಂದ ಹೊರಬಂದಿದ್ದು ಜಾಕ್‌ವೆಲ್ ಹೊರಭಾಗಕ್ಕೆ ಗೋಚರಿಸುತ್ತಿದೆ. ಇದೇ ರೀತಿ ಮುಂದುವರೆದರೆ ಸಂಕಷ್ಟ ಎದುರಾಗಲಿದೆ

ಹೇಮಾವತಿ ನದಿಯಲ್ಲಿ ನೀರು ಖಾಲಿಯಾಗುತ್ತಿರುವುದರಿಂದ ಕೆ.ಆರ್.ಪೇಟೆ ಪುರಸಭೆಯು ಎರಡು ದಿನಗಳಿಗೊಮ್ಮೆ ದಿನ  ಬಿಟ್ಟು ದಿನ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿದೆ. ಜಲಕ್ಷಾಮದ ಅರಿವಿದ್ದರೂ ಜೀವಜಲವಾದ ಕುಡಿಯುವ ನೀರನ್ನು ಪೋಲು ಮಾಡುತ್ತಿರುವ ಪಟ್ಟಣದ ಜನತೆ ನಲ್ಲಿಯ ನೀರಿನಲ್ಲಿಯೇ ಪಾತ್ರೆ ತೊಳೆಯುವುದು, ಬಟ್ಟೆ ಒಗೆಯುವುದು ಸೇರಿದಂತೆ ಬೇಕಾಬಿಟ್ಟಿಯಾಗಿ ಬಳಕೆ ಮಾಡುತ್ತಿದ್ದಾರೆ. ಪುರಸಭೆಯ ಸಿಬ್ಬಂದಿ ಎಷ್ಟೇ ಸೂಚನೆ ನೀಡಿದರೂ ನಲ್ಲಿಗಳಿಗೆ ಟ್ಯಾಪ್ ಹಾಕದ ಸಾರ್ವಜನಿಕರು ಕುಡಿಯುವ ನೀರನ್ನು ಯಥೇಚ್ಛವಾಗಿ ಪೋಲು ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ.

Ashika S

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

22 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

36 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago