News Karnataka Kannada
Thursday, April 18 2024
Cricket
ಮಂಡ್ಯ

ಕೆ.ಆರ್.ಪೇಟೆ: ಹಾವು ಕಡಿತದಿಂದ ರೈತ ಸಾವು

K.R. Pet: Farmer dies due to snakebite
Photo Credit : News Kannada

ಕೆ.ಆರ್.ಪೇಟೆ: ವಿಷಕಾರಿ ಹಾವು ಕಡಿತದಿಂದ ರೈತ ಸಾವನ್ನಪ್ಪಿದ ಘಟನೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಶ್ರಾವಣಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶ್ರಾವಣಹಳ್ಳಿ ಗ್ರಾಮದ ಮಂಜೇಗೌಡ (49) ಹಾವು ಕಡಿತದಿಂದ ಸಾವನ್ನಪ್ಪಿದ ದುರ್ದೈವಿ. ಇವರು ಶುಕ್ರವಾರ ಸಂಜೆ 5.30ರ ಸಮಯದ ತಮ್ಮ ಜಮೀನಿನಲ್ಲಿ ಬೆಳೆದ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ವಿಷಕಾರಿ ಹಾವು ಕಡಿದು ಮೃತಪಟ್ಟಿದ್ದು, ದುಂಡುಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ವಾರಸುದಾರರಿಗೆ ನೀಡಲಾಯಿತು.

ಸ್ಥಳಕ್ಕೆ ಶಾಸಕ ಹೆಚ್.ಟಿ ಮಂಜು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದಿಂದ ಬರುವ ಸೂಕ್ತ ಪರಿಹಾರ ಬರಿಸುವುದಾಗಿ ಭರವಸೆ ನೀಡಿದರು. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಮಂಜೇಗೌಡರ ನಿಧನದಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾ. ಪಂ.ಸದಸ್ಯ ಶ್ರಾವಣಹಳ್ಳಿ ಅರುಣ್ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು