Categories: ಮಂಡ್ಯ

ಕೆ.ಆರ್ ಪೇಟೆ: ಬಸ್ ಮಗುಚಿ ಬಿದ್ದು ಪ್ರಯಾಣಿಕರಿಗೆ ಗಾಯ

ಕೆ.ಆರ್ ಪೇಟೆ: ಸಾರಿಗೆ ಬಸ್ಸೊಂದು ತಿರುವಿನಲ್ಲಿ ಮಗುಚಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಸುಮಾರು 30ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮುರುಕನಹಳ್ಳಿ ಸೇತುವೆಯ ನಡೆದಿದೆ.

ಕೆ.ಆರ್.ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುರುಕನಹಳ್ಳಿ ಗ್ರಾಮದ ಬಳಿ ಕೆಎ-09 ಎಫ್ -5282 ನಂಬರಿನ ಕೆ ಎಸ್ ಆರ್ ಟಿ ಸಿ ಬಸ್ ಗದಗದಿಂದ- ಮೈಸೂರಿನ ಕಡೆಗೆ ಹೋಗುತ್ತಿದ್ದಾಗ ಮರುಕನಹಳ್ಳಿ ಕ್ರಾಸ್ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ, ನಿರ್ವಾಹಕ ಸೇರಿದಂತೆ ಸುಮಾರು 30 ಮಂದಿಗೆ ಸಣ್ಣ ಪುಟ್ಡ ಗಾಯಗಳಾಗಿವೆ. ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಗಾಯಗೊಂಡವರನ್ನು ಕೆ ಆರ್ ಪೇಟೆ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯ ವಿಚಾರ ತಿಳಿದ ತಕ್ಷಣವೇ ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪ್ರಮೋದ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನಾ ಸ್ಥಳವು ಹೆಚ್ಚು ಅಪಾಯಕಾರಿಯಾದ ತಿರುವಿನಿಂದ ಕೂಡಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಸುರಕ್ಷಾ ಗೋಡೆಯನ್ನು ನಿರ್ಮಿಸುವ ಮೂಲಕ ಅಪಘಾತ ಹಾಗೂ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ತಾಲ್ಲೂಕು ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯಾಧ್ಯಕ್ಷ ಎಸ್.ರವಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

4 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago