Categories: ಮಂಡ್ಯ

ಕೆ.ಆರ್.ಪೇಟೆ: ಶ್ರೀ ತಾವರೆಕೆರೆ ಮಹಾಲಕ್ಷ್ಮಿ ಸಂಭ್ರಮದ ರಥೋತ್ಸವ

ಕೆ.ಆರ್.ಪೇಟೆ: ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀರುವಳ್ಳಿ, ಮೂಡನಹಳ್ಳಿ, ಅಲೆನಹಳ್ಳಿ, ವ್ಯಾಪ್ತಿಗೆ ಬರುವ ಶ್ರೀ ತಾವರೆಕೆರೆ ಮಹಾಲಕ್ಷ್ಮಿ ದೇವಿಯ ಮಹಾ ರಥೋತ್ಸವ ಭಕ್ತರ ಜಯ ಘೋಷಗಳ ಮಧ್ಯೆ   ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ನೆರವೇರಿತು.

ಶೃಂಗಾರಗೊಂಡಿದ್ದ ರಥದಲ್ಲಿ ದೇವತೆ ಶ್ರೀ ತಾವರೆಕೆರೆ ಮಹಾಲಕ್ಷ್ಮಿ ಅಮ್ಮನವರ ಉತ್ಸವ ಮೂರ್ತಿಯನ್ನುರಥದ ಮೇಲೆ ಏರುತ್ತಿದ್ದಂತೆ ಭಕ್ತರ ಜಯಕಾರ ಮುಗಿಲು ಮುಟ್ಟಿತು. ಮಕ್ಕಳು, ವೃದ್ಧರು, ಮಹಿಳೆಯರು ಹೊಸ ಬಟ್ಟೆಗಳನ್ನುಟ್ಟು ಶ್ರೀ ತಾವರೆಕೆರೆ ಅಮ್ಮನವರ ಪ್ರಾಂಗಣದಲ್ಲಿ ಮಧ್ಯಾಹ್ನ 12 ಗಂಟೆಯಿಂದಲೆ ಜಮಾವಣೆಗೊಂಡು ನಂತರ ನಡೆದ ರಥೋತ್ಸವವನ್ನು ಕಣ್ತುಂಬಿಕೊಂಡರು. ರಥೋತ್ಸವದ ನಂತರ ಭಕ್ತರುಸರದಿಯಲ್ಲಿ ನಿಂತು ದೇವರ ದರ್ಶನ ಪಡೆದರು.  ಹಣ್ಣು ದವನ ಈಡು ಗಾಯಿಗಳನ್ನು ಒಡೆದು ಹರಕೆ ತೀರಿಸಿ ಪ್ರಸಾದ ಸ್ವೀಕರಿಸಿದರು. ಮಹಾರಥೋತ್ಸವಕ್ಕೆ ಪಟ್ಟಣ ಸೇರಿದಂತೆ ಸುಮುತ್ತಲಿನ ಅನೇಕ ಗ್ರಾಮಗಳ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದ ದೃಶ್ಯ ಸರ್ವೇ ಸಾಮಾನ್ಯವಾಗಿತ್ತು.

ಜಾತ್ರಾ ಸಮಿತಿಗೆ ಆರ್ಥಿಕ ಅಳಿಲು ಸಹಾಯ ನೀಡಿ ರಥ ಹೇಳಿಯುವ ಮೂಲಕ ದೇವರ ಕೃಪೆಗೆ ಸಮಾಜ ಸೇವಕ ಆರ್. ಟಿ. ಓ ಮಲ್ಲಿಕಾರ್ಜುನ್  ಪಾತ್ರರಾದರು. ಸಂಪ್ರದಾಯದಂತೆ ಮುಂಜಾನೆ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳು ಪ್ರಾರಂಭವಾಗಿ ಸಾಯಂಕಾಲದವರೆಗೆ ಅನೇಕ ಚಟುವಟಿಕೆಗಳು ನಡೆದವು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ರೂಪ ಕೃಷ್ಣೇಗೌಡ, ತಾ. ಪಂ ಮಾಜಿಸದಸ್ಯನಿಂಗೇಗೌಡ,ಹರೀಶ, ಮಹದೇವ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಬಿ. ಎನ್ಕುಮಾರ್,ಕೃಷ್ಣೇಗೌಡ, ಪುಟ್ಟರಾಜು, ಬಿ.ಟಿ ಕುಮಾರ್, ಯುವ ಮುಖಂಡ ಅರುಣ್, ಡಿ ಚಂದ್ರು,ಬೀರುವಳ್ಳಿಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಿರೇಗೌಡ, ದಯಾನಂದ್, ದೊಡ್ಡೇಗೌಡ,ಮಿಲ್ ಕೃಷ್ಣೇಗೌಡ, ಸಾವಿರಾರು ಭಕ್ತಾದಿಗಳು ಸೇರಿದಂತೆ ಉಪಸ್ಥಿತರಿದ್ದರು.

Ashika S

Recent Posts

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

7 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

20 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

39 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

47 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

53 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

1 hour ago