Categories: ಮಂಡ್ಯ

ಕೃಷ್ಣರಾಜಪೇಟೆ: ಹೊಸಹೊಳಲು ಚಿಕ್ಕಕೆರೆಯ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಕೃಷ್ಣರಾಜಪೇಟೆ: ತಾಲ್ಲೂಕಿನ ಹೊಸಹೊಳಲು ಗ್ರಾಮದ ಚಿಕ್ಕಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಹೆಚ್.ಟಿ.ಮಂಜು   10ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ಕೆರೆಯ ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಹೊಯ್ಸಳ ಶಿಲ್ಪಕಲೆಯ ಅಪೂರ್ವ ತಾಣವಾಗಿರುವ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯಕ್ಕೆ ಆಗಮಿಸುವ ಪ್ರವಾಸಿಗರು ಹಾಗೂ ಯಾತ್ರಾರ್ಥಿಗಳನ್ನು ಸೆಳೆಯಲು ಚಿಕ್ಕಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಬೋಟಿಂಗ್ ಸೌಲಭ್ಯ, ಸಂಗೀತ ಕಾರಂಜಿ, ವಾಕಿಂಗ್ ಹಾಗೂ ಜಾಗಿಂಗ್ ಟ್ರಾಕನ್ನು ನಿರ್ಮಿಸುತ್ತಿರುವ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಯು ಕ್ಷೇತ್ರದ ಈ ಹಿಂದಿನ ಶಾಸಕರು ಹಾಗೂ ಮಾಜಿ ಸಚಿವರಾದ ಡಾ.ನಾರಾಯಣಗೌಡರ ವಿಶೇಷ ಆಸಕ್ತಿಯ ಫಲವಾಗಿ ನಡೆಯುತ್ತಿದೆ.

ಕೆರೆಯ ಸುತ್ತಲೂ ತಂತಿ ಬೇಲಿ ಅಳವಡಿಸುವುದು, ಉದ್ಯಾನವನ ಹಾಗೂ ಹೂದೋಟದ ನಿರ್ಮಾಣ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾಮಗಾರಿಗಳನ್ನು ಶೀಘ್ರವೇ ಹಮ್ಮಿಕೊಂಡು ಸಾರ್ವಜನಿಕರ ಸೇವೆಗೆ ಚಿಕ್ಕಕೆರೆಯನ್ನು ಸಮರ್ಪಿಸಲಾಗುವುದು ಎಂದು ಎಇಇ ಅಜರ್ ಅಹಮದ್ ಅವರಿಗೆ ಸೂಚಿಸಿದರಲ್ಲದೆ, ಕೆರೆ ಅಭಿವೃದ್ಧಿಯ ಮೂಲ ಉದ್ದೇಶವನ್ನೇ ಇಲಾಖೆಯು ಮರೆತಿರುವುದಕ್ಕೆ ತರಾಟೆಗೆ ತೆಗೆದುಕೊಂಡರು.

ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯದೇ ಸಂಗೀತ ಕಾರಂಜಿ ಅಳವಡಿಸುವುದು, ಉದ್ಯಾನವನ ನಿರ್ಮಿಸುವ ಕೆಲಸ ನಡೆಯುತ್ತಿದೆ. ರೈತರ ಜಮೀನಿಗೆ ನೀರು ಹರಿಯುವ ತೂಬನ್ನು ಮುಚ್ಚಿ ಅವೈಜ್ಞಾನಿಕವಾಗಿ ಕೆರೆಯ ಏರಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸಾರ್ವಜನಿಕರು, ಗ್ರಾಮಸ್ಥರು ಹಾಗೂ ಯಾತ್ರಾರ್ಥಿಗಳು ಸೇರಿದಂತೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ಸೋಪಾನಕಟ್ಟೆ ಕಾಮಗಾರಿಯನ್ನು ನಡೆಸಬೇಕು. ಕೆರೆ ಏರಿಯ ಪಿಚಿಂಗ್ ಮತ್ತು ಲೈನಿಂಗ್ ಕಾಮಗಾರಿಯು ಗುಣಮಟ್ಟದಲ್ಲಿರಬೇಕು ಎಂದು ನಿರ್ದೇಶನ ನೀಡಿದರು.

ಈ ವೇಳೆ ಡಿಸಿಸಿ ಬ್ಯಾಂಕ್ ಪ್ರಭಾರಿ ಅಧ್ಯಕ್ಷ ಹೆಚ್.ಕೆ.ಅಶೋಕ್, ಪುರಸಭೆ ಸದಸ್ಯ ಹೆಚ್.ಡಿ.ಅಶೋಕ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರೇಗೌಡ, ಮಾಜಿ ಅಧ್ಯಕ್ಷರಾದ ಚಿಕ್ಕೇಗೌಡ, ರಾಮೇಗೌಡ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಜರ್ ಅಹಮದ್, ಪ್ರಥಮದರ್ಜೆ ಗುತ್ತಿಗೆದಾರ ಚಂದ್ರಮೋಹನ್, ಹರಳಹಳ್ಳಿ ಗ್ರಾಮ ಪಂಚಾಯತಿ ಮಾಜಿಅಧ್ಯಕ್ಷ ಕರ್ತೇನಹಳ್ಳಿ ಸುರೇಶ್, ಟಿಎಪಿಸಿಎಂಎಸ್ ನಿರ್ದೇಶಕ ಬಲದೇವ್, ಬಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಂದೀಶ್, ಮುಖಂಡರಾದ ಮಂಜುನಾಥ್, ರಘು ಮೊದಲಾದವರಿದ್ದರು.

Gayathri SG

Recent Posts

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

4 mins ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

18 mins ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

37 mins ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

59 mins ago

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…

2 hours ago

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…

2 hours ago