News Karnataka Kannada
Monday, April 29 2024
ಮಂಡ್ಯ

ಹನುಮ ಧ್ವಜ ತೆರುವು ಖಂಡಿಸಿ ಬಿಜೆಪಿ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಭಾಗಿ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ ಭಾಗಿಯಾಗಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಹನುಮ ಧ್ವಜ ತೆರವು ಕಾಂಗ್ರೆಸ್  ಸರಕಾರದ ಉದ್ಧಟತನವನ್ನು ತೋರಿಸುತ್ತಿದೆ ಎಂದು  ಆರೋಪಿಸಿದರು.
Photo Credit : News Kannada

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ ಭಾಗಿಯಾಗಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಹನುಮ ಧ್ವಜ ತೆರವು ಕಾಂಗ್ರೆಸ್  ಸರಕಾರದ ಉದ್ಧಟತನವನ್ನು ತೋರಿಸುತ್ತಿದೆ ಎಂದು  ಆರೋಪಿಸಿದರು.

ಜೈ ಶ್ರೀರಾಮ್ ಘೋಷಣೆಯೊಂದಿಗೆ ಭಾಷಣ ಆರಂಭಿಸಿದ ಕುಮಾರಸ್ವಾಮಿ, ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಲಾಠಿ ಚಾರ್ಜ್​ ವೇಲೆ ಒಬ್ಬರ ಕಣ್ಣಿಗೆ ಏಟು ಬಿದ್ದಿದೆ. ಕಣ್ಣು ಹೋಗಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಣ್ಣು ತಂದು ಕೊಂಡುತ್ತಿತ್ತಾ? ಪೊಲೀಸರೇ ಎಚ್ಚರವಾಗಿರಿ. ಎಷ್ಟು ದಿನ ನಿಮ್ಮ ಆಟ ನಡೆಯುತ್ತದೆ ನಾನು ನೋಡುತ್ತೇನೆ. ಯಾವಾನೋ ಹೇಳುತ್ತಾನೆ ಅಂತಾ ಹೇಗೆ ಬೇಕೋ ಹಾಗೇ ಕೆಲಸ ಮಾಡುವುದನ್ನು ನಾವು ಒಪ್ಪಲ್ಲ ಎಂದು ಹೇಳಿದರು.

ಹನುಮ ಧ್ವಜ ತೆರುವು ಖಂಡಿಸಿ ಬಿಜೆಪಿ ಕರೆ ನೀಡಿದ ಪ್ರತಿಭಟನೆಯಲ್ಲಿ ಜೆಡಿಎಸ್ ಕೂಡ ಕೈಜೋಡಿಸಿದೆ. ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ಕಾರ್ಯಕರ್ತರೊಬ್ಬರು ಜೀಪ್ ಹತ್ತಿ ಕುಮಾರಸ್ವಾಮಿ ಅವರಿಗೆ ಕೇಸರಿ ಶಾಲು ಹಾಕಿದರು.

ಇದೇ ವೇಳೆ ವೇದಿಕೆ ಮೇಲಿದ್ದ ಬಿಜೆಪಿ ನಾಯಕ ಸಿಟಿ ರವಿ ಅವರು ಕುಮಾರಸ್ವಾಮಿ ಅವರನ್ನು ವೇದಿಕೆಗೆ ಬರುವಂತೆ ಕೈಸನ್ನೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು