ಮಂಡ್ಯ

ಮಂಡ್ಯ : ಪಾಂಡವಪುರ ಪಟ್ಟಣದ ಕ್ರೀಡಾಂಗಣದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ʼಪುನೀತೋತ್ಸವʼ

ಮಂಡ್ಯ : ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರ ಸ್ಮರಣೆಯ ನಿಮಿತ್ತ ನಾಳೆಯಿಂದ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ʼಪುನೀತೋತ್ಸವʼ ಜರುಗಲಿದೆ.

ನಾಳೆ ಪ್ರಾರಂಭವಾಗುವ ಪುನೀತೋತ್ಸವ ನ.27ರ ವರೆಗೆ ಅದ್ದೂರಿಯಾಗಿ ಜರುಗಲಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಕ್ರೀಡಾಂಗಣ ಈ ಅದ್ಧೂರಿ ಉತ್ಸವಕ್ಕೆ ಸಾಕ್ಷಿಯಾಗಲಿದೆ. ನಾಳೆ ಸಂಜೆ ಈ ಕಾರ್ಯಕ್ರಮಕ್ಕೆ ಚಾಲನೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಅಲ್ಲದೆ, ಪುನೀತೋತ್ಸವ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ವಿಜಯ್ ಪ್ರಕಾಶ್, ಅನನ್ಯಭಟ್ ನೇತೃತ್ವದಲ್ಲಿ ಕಂಠಗಾಯನ ನಡೆಯಲಿದೆ.

ಅಲ್ಲದೆ, ಕಾಮಿಡಿ ಸ್ಟಾರ್ ಗಳಿಂದಲೂ ಹಾಸ್ಯ ಸಂಜೆ ಕಾರ್ಯಕ್ರಮ ಜರುಗಲಿದೆ. ಪುನೀತೋತ್ಸವದಲ್ಲಿ ಸ್ಯಾಂಡಲ್‌ವುಡ್‌ ಸ್ಟಾರ್‌ ನಟ-ನಟಿಯರೂ ಸಹ ಭಾಗಿಯಾಲಿದ್ದಾರೆ. ಈ ಕಾರ್ಯಕ್ರಮವು ಡಾ. ರಾಜ್‌ಕುಮಾರ್‌ ಅವರ ಅಪ್ಪಟ ಅಭಿಮಾನಿಯಾಗಿರುವ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸ ಸಿ.ಎಸ್‌. ಪುಟ್ಟರಾಜು ಅವರ ನೇತೃತ್ವದಲ್ಲಿ ನಡೆಯಲಿದೆ.

ಈಗಾಗಲೇ ಪಾಂಡವಪುರ ಪಟ್ಟಣ ಪುನೀತೋತ್ಸವ ಕಾರ್ಯಕ್ರಮಕ್ಕೆ ಸಕಲ ರೀತಿಯಿಂದ ಸಿದ್ಧವಾಗಿದೆ. ಪಟ್ಟಣದಲ್ಲಿ ಅಪ್ಪು ಪ್ಲೇಕ್ಸ್ ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ. ಹಬ್ಬದಂತೆ ಅಪ್ಪು ಉತ್ಸವವನ್ನು ಶಾಸಕ ಸಿಎಸ್.ಪುಟ್ಟರಾಜು ಅವರು ನಡೆಸುತ್ತಿದ್ದಾರೆ. ಈ ವಿಚಾರ ಪುನೀತ್‌ ರಾಜಕುಮಾರ್‌ ಅವರ ಅಭಿಮಾನಿಗಳಲ್ಲಿ ಖುಷಿ ತಂದಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಶಾಸಕ ಪುಟ್ಟರಾಜು ಮನವಿ ಮಾಡಿದ್ದಾರೆ.

Sneha Gowda

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

4 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

22 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

27 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

37 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

57 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago