News Karnataka Kannada
Friday, May 10 2024
ಮಂಡ್ಯ

ಮಂಡ್ಯ: ಕುಂಭಮೇಳದ ಸಕಲ ಸಿದ್ಧತೆಗೆ ಡಿಸಿ ಸೂಚನೆ

Mandya: DC instructs all preparations for Kumbh Mela
Photo Credit : By Author

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಅಂಬಿಗರಹಳ್ಳಿ – ಸಂಗಾಪುರ-ಪುರದ ತ್ರಿವೇಣಿ ಸಂಗಮದಲ್ಲಿ ಅ.13 ರಿಂದ ಅ.16 ರವರೆಗೆ ಕುಂಭಮೇಳ ನಡೆಯಲಿದ್ದು, ಕುಂಭಮೇಳಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಡಿಸಿ ಎಸ್ ಅಶ್ವತಿ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ನಡೆಯುವ ಕುಂಭಮೇಳ ಕಾರ್ಯಕ್ರಮಕ್ಕೆ ರಚಿಸಿದ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿ ಅವರು ಮಾತನಾಡಿ, ಅ. 06 ರಂದು ಶ್ರೀ ಮಲೈ ಮಹದೇಶ್ವರ ಬೆಟ್ಟದಲ್ಲಿ 3 ಜ್ಯೋತಿರಥಕ್ಕೆ ಚಾಲನೆ ನೀಡಲಾಗುವುದು ಜ್ಯೋತಿರಥಗಳು ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಅಕ್ಟೋಬರ್ 13 ರಂದು ಕೆ.ಆರ್.ಪೇಟೆಗೆ ತಲುಪಲಿದೆ.

ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಜ್ಯೋತಿ ಮೆರವಣಿಗೆ ನಡೆಯಲಿದೆ. ನಂತರದಲ್ಲಿ ಅಂಬಿಗರ ಹಳ್ಳಿಯ ತ್ರಿವೇಣಿ ಸಂಗಮಕ್ಕೆ ಜ್ಯೋತಿರಥ ತಲುಪಲಿದೆ. ಕುಂಭ ಮೇಳ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ವಿವಿಧ ಸಮಿತಿಯನ್ನು ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಯಾವುದೇ ಲೋಪಕ್ಕೆ ಆಸ್ಪಾದ ನೀಡದೆ ಕಾರ್ಯನಿರ್ವಹಿಸಲು ಸೂಚಿಸಿದರು.

ಲಕ್ಷಾಂತರ ಭಕ್ತಾಧಿಗಳು ಕುಂಭ ಮೇಳಕ್ಕೆ ಆಗಮಿಸಲಿದ್ದಾರೆ. ಭಕ್ತಾಧಿಕಾರಿಗಳಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಊಟದ ವ್ಯವಸ್ಥೆಯಾಗಬೇಕು. ಈಗಾಗಲೇ ಹಲವಾರು ದಾನಿಗಳು ಅಕ್ಕಿ, ಬೇಳೆ, ಎಣ್ಣೆ ಇನ್ನಿತರ ಆಹಾರ ಪದಾರ್ಥಗಳನ್ನು ನೀಡುತ್ತಿದ್ದು, ಅವುಗಳನ್ನು ಸೂಕ್ತವಾಗಿ ಸಂಗ್ರಹಿಸಿ ಕೊಳ್ಳಬೇಕು. ಇನ್ನುಳಿದಂತೆ ಬೇಕಿರುವ ಆಹಾರ ಪದಾರ್ಥಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಭಕ್ತಾದಿಗಳಿಗೆ ಆಹಾರ ವಿತರಿಸಲು ಬೇಕಿರುವ ಸಂಖ್ಯೆಯಲ್ಲಿ ಕೌಂಟರ್ ಗಳನ್ನು ತೆರೆಯಿರಿ ಎಂದರು.

ತ್ರಿವೇಣಿ ಸಂಗಮದಲ್ಲಿ ನಡೆಯುವ ನಾಲ್ಕು ದಿನ ಕುಂಭಮೇಳದಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸಲಿದ್ದು, ಮಂಡ್ಯ ಜಿಲ್ಲೆಯ ಜನರ ಜೊತೆಗೆ ಬೇರೆ ಬೇರೆ ಜಿಲ್ಲೆಗಳಿಂದ ಜನ ಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕುಂಭಮೇಳ ಕಾರ್ಯಕ್ರಮಕ್ಕೆ ಬರುತ್ತಾರೆ. ಹಾಗಾಗಿ ಕುಂಭಮೇಳ ನಡೆಯುವ ಸ್ಥಳ ಹಾಗೂ ಸುತ್ತಮುತ್ತಲು ಬಹಳ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಸ್ವಚ್ಛತಾ ಕಾರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೌರಕಾರ್ಮಿಕರನ್ನು ನಿಯೋಜಿಸುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು,ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ,ತಹಶೀಲ್ದಾರ್ ಗಳಾದ ಕುಂಇ ಅಹಮದ್, ಎಂ.ವಿ.ರೂಪ,ನಯನ, ನರಸಿಂಹಮೂರ್ತಿ, ನಂದೀಶ್, ಜಿಲ್ಲಾ ಯೋಜನಾಧಿಕಾರಿ ತುಷಾರಮಣಿ, ಜಿಲ್ಲಾ ವಾರ್ತಾಧಿಕಾರಿ ಎಸ್.ಹೆಚ್ ನಿರ್ಮಲ, ಕುಂಭಮೇಳ ಕಾರ್ಯಕ್ರಮದ ಸಂಯೋಜಕ ರಂಗನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು