News Karnataka Kannada
Sunday, May 05 2024
ಮಂಡ್ಯ

ಮಂಡ್ಯ:  ಭಾರತದ ಸ್ವಾತಂತ್ರದ ಹೋರಾಟ  ವಿಶ್ವಕ್ಕೆ ಮಾದರಿ ಎಂದ ಆರ್ ಆಶೋಕ್

India's freedom struggle is an example for the world, says R. Ashok
Photo Credit : By Author

ಮಂಡ್ಯ:  ಬ್ರಿಟಿಷರ ಸರ್ವಾಧಿಕಾರದ ಆಳ್ವಿಕೆಯಿಂದ ಮುಕ್ತಗೊಳಿಸಿ ಭಾರತವನ್ನು ಸ್ವಾತಂತ್ರ್ಯಗೊಳಿಸಿದ  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ನೇತೃತ್ವದ ನಡೆದ ಅಹಿಂಸಾತ್ಮಕ ಹೋರಾಟ ವಿಶ್ವದ ಇತಿಹಾಸದಲ್ಲೇ ಮಾದರಿಯಾಗಿದೆ ಎಂದು ಕಂದಾಯ ಸಚಿವರಾದ  ಆರ್ ಆಶೋಕ್ ರವರು ತಿಳಿಸಿದರು.

ನಗರದ ಭಾರತ ರತ್ನ ಸರ್ .ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ನಗರ ಸಭೆಯ ವತಿಯಿಂದ ಭಾರತ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿ, ಯಾವುದೇ ರಕ್ತಪಾತವಿಲ್ಲದೆ, ಮದ್ದುಗುಂಡುಗಳ ಕಾಳಗವಿಲ್ಲದೆ ಸತ್ಯ, ಅಹಿಂಸೆ, ಸತ್ಯಾಗ್ರಹದಂತಹ ಅಹಿಂಸಾತ್ಮಕ ಅಸ್ತ್ರಗಳ ಮೂಲಕ ಬ್ರಿಟಿಷರನ್ನು ದೇಶ ಬಿಟ್ಟು ಹೋಗುವಂತೆ ಮಾಡಿದ ವಿನೂತನ ಹೋರಾಟವಿದು ಎಂದರು.

ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಜೀ, ಜವಾಹರ್ ಲಾಲ್ ನೆಹರು, ಸರ್ದಾರ್ ವಲ್ಲಭಾಯಿ ಪಟೇಲ್, ಗೋಪಾಲಕೃಷ್ಣ ಗೋಖಲೆ, ಲೋಕಮಾನ್ಯ ತಿಲಕ್, ನೇತಾಜಿ ಸುಭಾಷ್ ಚಂದ್ರಬೋಸ್, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಭಗತ್ ಸಿಂಗ್ ಸೇರಿದಂತೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾದ ಸಮಸ್ತರಿಗೂ ಸಾಷ್ಟಾಂಗ ನಮಸ್ಕಾರಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಹೆಚ್.ಕೆ. ವೀರಣ್ಣಗೌಡ, ಟಿ ಸಿದ್ದಲಿಂಗಯ್ಯ, ಹೆಚ್.ಸಿ ದಾಸಪ್ಪ, ಇಂಡುವಾಳು ಹೊನ್ನಯ್ಯ, ಹೊನಗನಹಳ್ಳಿ ಪುಟ್ಟಣ್ಣ, ಶಿವಪುರ ತಿರುಮಲೇಗೌಡ, ಟಿ.ಎನ್ ಮಾದಪ್ಪಗೌಡ, ಎಂ ಮಹಾಬಲರಾವ್, ವೆಂಕಟಗಿರಿಯಪ್ಪ, ಡಾ:ಪಶುಪತಿರಾವ್, ಮಳವಳ್ಳಿ ವೀರಪ್ಪ, ಎಸ್.ಎಂ. ಮಲ್ಲಯ್ಯ ರವರು ಸೇರಿದಂತೆ ಮುಂತಾದವರು ಭಾಗವಹಿಸಿದ್ದಾರೆ ಎಂದರು. ಅತ್ಯಂತ ಸಂಪನ್ನ ಜನರ ಬಹುದೊಡ್ಡ ಸಂಸ್ಕ್ರತಿಯೇ ಮಂಡ್ಯ ಜಿಲ್ಲೆಯಲ್ಲಿದೆ. ಸಾಮರಸ್ಯಕ್ಕೆ, ಸಹಬಾಳ್ವೆಗೆ ಮಂಡ್ಯ ಜಿಲ್ಲೆಯ ಬಹುದೊಡ್ಡ ಉದಾಹರಣೆಯಾಗಿದೆ. ಅದ್ಭುತ ಎನಿಸುವ ಮಾನವ ಸಂಪನ್ಮೂಲವಿದೆ. ಕೃಷಿಯ ಅಭ್ಯುದಯಕ್ಕೆ, ಸಾಹಸ ಕ್ರೀಡೆಗೆ, ಉದ್ದಿಮೆಗಳ ಸ್ಥಾಪನೆಗೆ, ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ, ಪರಿಸರದ ಸಿರಿಯನ್ನು ಹೆಚ್ಚಿಸಲಿಕ್ಕೆ ಬೇಕಾದ ಎಲ್ಲ ಅವಕಾಶಗಳನ್ನು ಮಂಡ್ಯ ಜಿಲ್ಲೆ ತನ್ನ ಮಡಿಲಿನಲ್ಲಿ ತುಂಬಿಕೊಂಡಿವೆ ಎಂದರು.

ಮೈಸೂರು ಸಕ್ಕರೆ ಕಾರ್ಖಾನೆಯು 2019-20 ನೇ ಸಾಲಿನಿಂದ ಸ್ಥಗಿತಗೊಂಡಿರುತ್ತದೆ. ಸರ್ಕಾರವು 2022 23 ನೇ ಸಾಲಿನ ಬಜೆಟ್ ನಲ್ಲಿ ರೂ.50 ಕೋಟಿ ಮಂಜೂರು ಮಾಡಿರುತ್ತದೆ.  ಕಾರ್ಖಾನೆಯನ್ನು ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಈ ತಿಂಗಳಿನಲ್ಲಿ  ಚಾಲನೆ ನೀಡಲಾಗುವುದು. ರೈತ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು  ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಇದುವರೆವಿಗೂ 28988 ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ರೂ. 11.96 ಕೋಟಿ ಶಿಷ್ಯವೇತನವನ್ನು ನೀಡಲಾಗಿದೆ.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 270572 ಫಲಾನುಭವಿಗಳಿಗೆ ತಲಾ 6000 ರೂ ಸಹಾಯಧನವನ್ನು ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನಸಭಾ ಶಾಸಕರಾದ ಎಂ.ಶ್ರೀನಿವಾಸ್, ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್, ನಗರಸಭೆ ಅಧ್ಯಕ್ಷರಾದ ಹೆಚ್.ಎಸ್ ಮಂಜು, ಉಪಾಧ್ಯಕ್ಷೆ ಇಷ್ರತ್ ಫಾತಿಮಾ, ಮುಡ ಅಧ್ಯಕರಾದ ಶ್ರೀನಿವಾಸ್, ಜಿಲ್ಲಾಧಿಕಾರಿ ಎಸ್.ಅಶ್ವತಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿ.ಪಂ. ಸಿಇಒ ಶಾಂತ ಎಲ್. ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು