News Karnataka Kannada
Wednesday, May 08 2024
ಮಂಡ್ಯ

ಮಂಡ್ಯ: ಅಭಿವೃದ್ಧಿ ಹೆಸರಲ್ಲಿ ಬಾಲ ಕಾರ್ಮಿಕರ ನೇಮಕ ಅಪರಾಧ

It is a crime to recruit child labour in the name of development
Photo Credit : By Author

ಮಂಡ್ಯ: ಅಭಿವೃದ್ಧಿ ಹೆಸರಲ್ಲಿ ಬಾಲಕಾರ್ಮಿಕರನ್ನು ಕಡಿಮೆ ವೇತನಕ್ಕೆ ಉದ್ದಿಮೆಗಳಲ್ಲಿ ನೇಮಿಸಿಕೊಳ್ಳುವುದು ಅಪರಾಧ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಜಿ ರಮಾತಿಳಿಸಿದರು.

ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಬಾಲ ಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ಖಾಸಗಿ ಸಂಸ್ಥೆ, ಉದ್ದಿಮೆಗಳಲ್ಲಿ ಹಾಗೂ ಮನೆಗಳಲ್ಲೂ ಕೂಡ ಇರುತ್ತಾರೆ. ಇದು ಕಾನೂನು ಅಪರಾಧವಾಗಿದೆ ಎಂದರು.

ಬಾಲಕಾರ್ಮಿಕ ಪದ್ಧತಿ  ಹಾಗೂ ಅದರ ಕಾನೂನುನಿನ ಬಗ್ಗೆ ತಿಳುವಳಿಕೆ ಬರಲಿ ಎಂದು ಇಂತಹ ಜಾಗೃತಿ ಜಾಥಗಳು ನಡೆಯುತ್ತಿವೆ. ಬಾಲಕಾರ್ಮಿಕ  ಹಾಗೂ ಕಿಶೋರಕಾರ್ಮಿಕ ಪದ್ಧತಿಯನ್ನುಅನುಸರಿಸಿದರೆ ಕಾನೂನಿನ ಪಂಜರದಲ್ಲಿ ಸಿಲುಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಮಾತನಾಡಿ 18 ವರ್ಷದ ಕೆಳಗಿನ ಮಕ್ಕಳನ್ನ ಬಾಲಕಾರ್ಮಿಕರಾಗಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಸಾರ್ವಜನಿಕರು ಹಾಗೂ ಪೋಷಕರು ತಮ್ಮ ಮಕ್ಕಳನ್ನ ಯಾವುದೇ ಕೆಲಸದಲ್ಲಿ ತೊಡಗಿಸಿಕೊಳ್ಳದೆ  ಸಾಕ್ಷರ ಹಾಗೂ ಸಭ್ಯ  ಸಮಾಜ ನಿರ್ಮಾಣ ಮಾಡುವುದಕ್ಕೆ ಕೈ ಜೋಡಿಸಬೇಕು ಎಂದು ಜಿಲ್ಲಾಡಳಿತ ಪರವಾಗಿ ಮನವಿ ಮಾಡುತ್ತಿದ್ದೇನೆ.

ಖಾಸಗಿ ಸಂಸ್ಥೆ, ಹೋಟೆಲ್, ನಗರ ಸ್ಥಳೀಯ ಸಂಸ್ಥೆ, ಹಾಗೂ ಕಾರ್ಖಾನೆಗಳಲ್ಲಿ ಬಾಲಕಾರ್ಮಿಕರನ್ನು  ನೇಮಿಸಿಕೊಳ್ಳುವುದು  ಕಂಡು ಬಂದರೆ ಅವರನ್ನ ಶಿಕ್ಷೆಗೆ ಒಳಪಡಿಸಲಾಗುವುದು. ಹಾಗಾಗಿ ಇದಕ್ಕೆ ಅವಕಾಶ ಮಾಡಿಕೊಡದೆ ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದರು.

ಜಾಥದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಾಣಿ.ಎ ಶೆಟ್ಟಿ, ಕಾರ್ಮಿಕ ಅಧಿಕಾರಿ ಮಂಜುಳಾದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ  ನಾಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ ಜವರೇಗೌಡ, ವಕೀಲರ ಸಂಘದ ಅಧ್ಯಕ್ಷ ಎಂ.ಟಿ ರಾಜೇಂದ್ರ ಸೇರಿದಂತೆ ಹಲವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು