News Karnataka Kannada
Tuesday, May 07 2024
ಮಂಡ್ಯ

ಮಂಡ್ಯ: ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಜನರೇ ತೀರ್ಮಾನಿಸಲಿದ್ದಾರೆ- ಸಿಎಂ ಬೊಮ್ಮಾಯಿ

Mysuru: We will be providing farmer-centric programmes in agriculture: CM Bommai
Photo Credit : G Mohan

ಮಂಡ್ಯ, ಡಿ.16: ಕಾಂಗ್ರೆಸ್ ನವರು ದೇಶದ ಪರವಾಗಿದ್ದಾರೋ ಅಥವಾ ಭಯೋತ್ಪಾದಕರ ಪರವಾಗಿದ್ದಾರೋ ಎಂಬ ಬಗ್ಗೆ ಸ್ಪಷ್ಟವಾದ ಉತ್ತರ ಬೇಕು. ಕಾಂಗ್ರೆಸ್ ನ ನಿಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ನವರು ಟಿಪ್ಪುವಿನ ಬಗ್ಗೆ ಹಾಗೂ ಭಯೋತ್ಪಾದಕರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಾರೆ. ಇಂತಹ ಕೆಲಸಕ್ಕೆ ಕೈಹಾಕಿದರೆ ಇಲ್ಲಿನ ಜನ ಹಾಗೂ ಕಾನೂನು ಅವರನ್ನು ಕ್ಷಮಿಸುವುದಿಲ್ಲ ಎಂದರು.

ಕಾಂಗ್ರೆಸ್ನಿಂದ ರಾಜ್ಯಕ್ಕೆ ದೌರ್ಭಾಗ್ಯ :
ಕಾಂಗ್ರೆಸ್ ನವರ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಮೋದಿಯವರದ್ದು, ಸಿದ್ದರಾಮಯ್ಯನವರ ಚಿತ್ರದ ಚೀಲ ಮಾತ್ರ ಕಾಂಗ್ರೆಸ್ ನವರದ್ದು. ಬಡ ಎಸ್ ಸಿ ಎಸ್ ಟಿ ಮಕ್ಕಳ ಹಾಸ್ಟೆಲ್ ಗಳ ದಿಂಬು ಹಾಸಿಗೆ ಖರೀದಿಯಲ್ಲಿ ಹಗರಣ, ಸಣ್ಣ ಮತ್ತು ಬೃಹತ್ ನೀರಾವರಿಯಲ್ಲಿ ಭ್ರಷ್ಟಾಚಾರ ಮಾಡಿ, ಕಾಂಗ್ರೆಸ್ ರಾಜ್ಯಕ್ಕೆ ದೌರ್ಭಾಗ್ಯವನ್ನು ತಂದರು. ಮಂಡ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ಕನಸು ಕಾಣುತ್ತಿದ್ದಾರೆ. ಆದರೆ ಜನ ಜಾಗೃತರಾಗಿದ್ದು, ದಕ್ಷಿಣ ಭಾಗದ ಕರ್ನಾಟಕದಲ್ಲಿ ಭಾಜಪ ಗೆಲುವನ್ನು ಕಾಣಲಿದೆ ಎಂಬ ವಿಶ್ವಾಸವಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಮುಖಂಡರುಗಳಾದ ಇಂದ್ರೇಶ್ ಸಿ.ಪಿ ಉಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು