News Karnataka Kannada
Wednesday, May 08 2024
ಮಂಡ್ಯ

ಮಂಡ್ಯ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ

Youth beaten to death with deadly weapons
Photo Credit : By Author

ಮಂಡ್ಯ, ಜು.4: ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಕೊಲೆಗಳು ಮುಂದುವರಿದಿವೆ. ದುಷ್ಕರ್ಮಿಗಳಿಂದ ಭಾನುವಾರ ರಾತ್ರಿ ಯುವಕನೊಬ್ಬನನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪಟ್ಟಣದ ಶಾಂತಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ.

ಜಿಲ್ಲೆಯಲ್ಲಿ ಒಂದು ತಿಂಗಳಲ್ಲಿ ನಡೆದ ಮೂರನೇ ಕೊಲೆ ಪ್ರಕರಣ ಇದಾಗಿದೆ. ಮೃತರನ್ನು ಬೆಳ್ಳೂರಿನ ಅಂಬೇಡ್ಕರ್ ಕಾಲೋನಿ ನಿವಾಸಿ ಹಾಗೂ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಸುನಿಲ್ ಎಂದು ಗುರುತಿಸಲಾಗಿದೆ. ಅವರು ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಅವರನ್ನು ತಡೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.

ಗಂಭೀರವಾಗಿ ಗಾಯಗೊಂಡಿದ್ದ ಸುನಿಲ್ ನನ್ನು ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ನಾಗಮಂಗಲದ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು