ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ ಖರೀದಿ ದರದಲ್ಲಿ ಲೀಟರ್ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ. ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ಜು.13ರಂದು ಸಭೆ ನಡೆಸಿ ರೈತರಿಂದ ಖರೀದಿ ಮಾಡುವ ಹಾಲಿನ ದರದಲ್ಲಿ ಲೀಟರ್ಗೆ 1.75 ರೂ. ಕಡಿತ ಮಾಡಲು ನಿರ್ಧರಿಸಿದೆ.
ಈ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಕೆಯಾಗಲಿದೆ. ಮುಂಗಾರು ಮಳೆ ಆರಂಭ ಹಿನ್ನೆಲೆ ದರ ಕಡಿತ ಎಂದು ಮನ್ಮುಲ್ ಸಮರ್ಥನೆ ನೀಡಿದೆ. ಈ ಹಿಂದೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಇದೀಗ ಹಾಲಿನ ದರದಲ್ಲಿ ಕಡಿತ ಮಾಡಿದ್ದರಿಂದ ಹಾಲು ಉತ್ಪಾದಕರಿಗೆ 32.25 ರೂ. ಬದಲಿಗೆ 30.50 ರೂ. ಸಿಗಲಿದೆ.