ಮಂಡ್ಯ: ಮಂಡ್ಯದಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತಂತೆ ಅಪ್ರಾಪ್ತೆ ಬಾಲಕಿಯ ಪೋಷಕರು ಮದ್ದೂರು ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ ನನ್ನ ಮಗಳನ್ನು ಪುಸಲಾಯಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ, ಮನೆಗೆ ಬಂದು ಕಿರುಕುಳ ನೀಡುತ್ತಿರೋದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಅತ್ಯಾಚಾರವೆಸಗಿ ವಿಡಿಯೋ ಮಾಡಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗುತ್ತಿದೆ. ಸಹಪಾಠಿಗಳೇ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮೂವರು ಯುವಕರನ್ನ ವಶಕ್ಕೆ ಪಡೆದು ಮದ್ದೂರು ಪಟ್ಟಣ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.