News Karnataka Kannada
Sunday, May 05 2024
ಮಂಡ್ಯ

ದೇಶ ಕಾಯಲು ಮೋದಿಜೀ, ಕಾವೇರಿ ಕಾಯಲು ಕುಮಾರಣ್ಣ: ಪ್ರತಾಪ್ ಸಿಂಹ

ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌  ಒಂದಾದರೆ ಗೆಲುವು ನಿಶ್ಚಿತ. ದೇಶ ಕಾಯಲು ಮೋದಿಜೀ, ಕಾವೇರಿ ಕಾಯಲು ಕುಮಾರಣ್ಣ ಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
Photo Credit : NewsKarnataka

ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌  ಒಂದಾದರೆ ಗೆಲುವು ನಿಶ್ಚಿತ. ದೇಶ ಕಾಯಲು ಮೋದಿಜೀ, ಕಾವೇರಿ ಕಾಯಲು ಕುಮಾರಣ್ಣ ಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ನಾವು ಬಿಜೆಪಿ ಕಾರ್ಯಕರ್ತರು ಕುಮಾರಣ್ಣನ ಬೆನ್ನಿಗೆ ನಿಲ್ಲುತ್ತೇವೆ. ದೇಶದ ಭವಿಷ್ಯ‌ ನಿರ್ಧರಿಸುವ ಚುನಾವಣೆ ಇದು. ಪ್ರೀತಿ, ವಿಶ್ವಾಸದಿಂದ ಕುಮಾರಣ್ಣರನ್ನು ಕೇಂದ್ರ ಸಚಿವರನ್ನಾಗಿ ಮಾಡುತ್ತೇವೆ,  ನರೇಂದ್ರ ಮೋದಿ ಅವರ ಪುನರಾಯ್ಕೆ ನಿಶ್ಚಿತ ಎಂದು ಹೇಳಿದ್ದಾರೆ.

ಅಸೆಂಬ್ಲಿಯಲ್ಲಿ ಜೆಡಿಎಸ್‌ ಎನ್ನುವ ಕಾರ್ಯಕರ್ತರು ಎಂಪಿ ಚುನಾವಣೆ ಬಂದಾಗ ಮೋದಿ ಪರ ನಿಲುತ್ತಾರೆ. ಮಂಡ್ಯದವರು ಸ್ವಾಭಿಮಾನಿಗಳು. ಮಂಡ್ಯ, ಮೈಸೂರಿಗೆ ಅವಿನಾಭಾವ ಸಂಬಂಧ ಇದೆ ಎಂದರು.

ಕಾಂಗ್ರೆಸ್ ಕಾಲಿಟ್ಟ ಕೂಡಲೇ ರಾಜ್ಯಕ್ಕೆ ಬರ‌ ಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಮತ್ತೆ ಮಳೆ ಕೈ ಕೊಡುತ್ತದೆ. ಕೆಆರ್ ಎಸ್ ಬರಿದಾಗುತ್ತದೆ, ಎಚ್ಚರಿಕೆಯಿಂದ ಮತಚಲಾಯಿಸಿ ಎಂದು ಹೇಳಿದ್ದಾರೆ.

ಬಿಎಸ್ ಯಡಿಯೂರಪ್ಪ, ಕುಮಾರಣ್ಣ ಸಿಎಂ ಆಗಿದ್ದಾಗ ಮಳೆ, ಬೆಳೆ ಚೆನ್ನಾಗಿತ್ತು. ಕೆಆರ್​ಎಸ್​ ಬರಿದಾಗುವಾಗ ಸ್ಟಾಲೀನ್ ತಗಾದೆ ತೆಗೆಯಬೇಡಿ ಎನ್ನಲಿಲ್ಲ. ಆದರೆ ಚುನಾವಣೆಗಾಗಿ ಕೈ ಕೈ ಹಿಡಿದು ನಿಂತರು. ಇವತ್ತು ಕುಡಿಯುವ ನೀರಿಗೂ ಹೆಣಗಾಡುವ ಪರಿಸ್ಥಿತಿ ಇದೆ. ಗುತ್ತಿಗೆದಾರನಿಗೆ ಮತ ನೀಡಿದರೆ ಕಾವೇರಿ ಉಳಿಯಲ್ಲ. ಕರುಣೆಯ ಕುಮಾರಣ್ಣನಿಗೆ ಮತ ನೀಡಿ ಎಂದಿದ್ದಾರೆ.

ಮೈಸೂರಿನಲ್ಲಿ ನೆಲೆ‌ ಕಳೆದುಕೊಂಡ ಸಿದ್ದರಾಮಯ್ಯ ಬಾದಾಮಿಗೆ ಹೋಗಬಹುದು. ವಯನಾಡ್‌ನಿಂದ ರಾಹುಲ್ ಸಂಸದರಾಗಬಹುದು. ಆದರೆ ಕಾವೇರಿ ಉಳಿಸಿಕೊಟ್ಟ ದೇವೇಗೌಡರ ಮಗ ಮಂಡ್ಯದಿಂದ ಸಂಸದರಾಗಬಾರದಾ? ಮಂಡ್ಯದ ಮಗನಾಗಿ ಕುಮಾರಣ್ಣ ಸ್ಪರ್ಧೆ ಮಾಡುತ್ತಾರೆ. ಎಲ್ಲರೂ ಒಟ್ಟಾಗಿ ಕುಮಾರಣ್ಣನನ್ನು ಗೆಲ್ಲಿಸೋಣ ಎಂದರು.

ಶಿವರಾಮೇಗೌಡ ಸಂಸದರಾಗಿದ್ದಾಗ ಮಂಡ್ಯಕ್ಕೆ ಪಾಸ್‌ಪೋರ್ಟ್ ಸೇವಾ ಕೇಂದ್ರ ಬರಲು ಶ್ರಮಿಸಿದ್ದೆ. ಮಂಡ್ಯಕ್ಕೂ ಒಳಿತಾಗಲೆಂದು ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಕರ್ನಾಟಕವನ್ನ ಆಳುವುದು ಹಳೇ ಮೈಸೂರು. ಈ ಬಾರಿಯೂ ನಮ್ಮ ಶಕ್ತಿ ಸಾಬೀತಾಗಬೇಕು. ಕುಮಾರಣ್ಣ ಗೆದ್ದು ಬರಬೇಕು ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು