Categories: ಮಂಡ್ಯ

ಪಿರಿಯಾಪಟ್ಟಣ: ತಂಬಾಕು ಕೆಜಿಗೆ ರೂ 300 ನೀಡಲು ಆಗ್ರಹ

ಪಿರಿಯಾಪಟ್ಟಣ: ಉತ್ತಮ ಗುಣಮಟ್ಟದ ತಂಬಾಕಿಗೆ ಕೆಜಿಗೆ ರೂ 300 ನೀಡುವಂತೆ ಶಾಸಕ ಕೆ.ಮಹದೇವ್ ಆಗ್ರಹಿಸಿದರು. ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಗೆ ಭೇಟಿ ನೀಡಿ ಹರಾಜು ಪ್ರಕ್ರಿಯೆ ವೀಕ್ಷಿಸಿದ ಬಳಿಕ ಮಂಡಳಿ ಅಧಿಕಾರಿಗಳು ಹಾಗೂ ಖರೀದಿ ಕಂಪನಿ ಮುಖ್ಯಸ್ಥರು ಮತ್ತು ತಂಬಾಕು ರೈತರೊಂದಿಗೆ ಸಭೆ ನಡೆಸಿ ಅವರು ಮಾತನಾಡಿ, ಭಾರಿ ಮಳೆಯಿಂದಾಗಿ ಈ ಬಾರಿ ತಾಲ್ಲೂಕಿನಲ್ಲಿ ತಂಬಾಕು ಇಳುವರಿ ಕುಂಠಿತವಾಗಿದ್ದು ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ, ಮಾರಾಟ ಸಂದರ್ಭ ಬೆಳೆ ಬೆಳೆಯುವ ಖರ್ಚಿಗಿಂತ ಕಡಿಮೆ ಬೆಲೆ ದೊರೆಯುತ್ತಿರುವುದರಿಂದ ಹಲವು ರೈತರು ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ಜರುಗಿದರೂ ಸಹ ತಂಬಾಕು ಮಂಡಳಿ ಅಧಿಕಾರಿಗಳು ಹಾಗೂ ಖರೀದಿದಾರ ಕಂಪೆನಿಗಳು ಉತ್ತಮ ಗುಣಮಟ್ಟದ ತಂಬಾಕಿಗೆ ಹೆಚ್ಚು ಬೆಲೆ ನೀಡದೆ ರೈತರನ್ನು ನಿರ್ಲಕ್ಷಿಸುತ್ತಿವೆ.

ಗುಣಮಟ್ಟದ ತಂಬಾಕಿಗೆ ಪ್ರತಿ ಕೆಜಿಗೆ ಸರಾಸರಿ 300 ರೂ ನೀಡುವ ಮೂಲಕ ರೈತರ ಹಿತ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು, ಮಂಡಳಿ ಅಧಿಕಾರಿಗಳ ನೇತೃತ್ವ ಖರೀದಿದಾರ ಕಂಪೆನಿಗಳ ಸಭೆ ನಡೆಸಿ ದರದಲ್ಲಿ ವ್ಯತ್ಯಾಸವಾಗದಂತೆ ನಿಗಾವಹಿಸಬೇಕು, ರೈತರಿಂದ ಹೆಚ್ಚು ತಂಬಾಕು ಕೊಳ್ಳುವ ಐಟಿಸಿ ಕಂಪೆನಿಯವರು ತಮ್ಮ ವ್ಯಾಪಾರದ ಜತೆಗೆ ರೈತರಿಗೂ ಸಹ ಉತ್ತಮ ಬೆಲೆ ನೀಡಿ ಹಿತ ಕಾಯಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಮಂಡಳಿ ಹಾಗೂ ಖರೀದಿದಾರ ಕಂಪೆನಿಗಳ ವಿರುದ್ಧ ಪ್ರತಿಭಟಿಸಬೇಕಾಗುತ್ತದೆ. ಮಂಡಳಿ ನಿರ್ದೇಶಕಿ ಅಶ್ವಿನಿ ನಾಯ್ಡು ಅವರು ಮಾರುಕಟ್ಟೆ ಪ್ರಾರಂಭ ಸಂದರ್ಭ ರೈತರು ಹಾಗೂ ಖರೀದಿದಾರ ಕಂಪೆನಿಗಳು ಮತ್ತು ಮಂಡಳಿ ಅಧಿಕಾರಿಗಳ ಸಭೆ ನಡೆಸದೆ ನಿರ್ಲಕ್ಷ್ಯ ವಹಿಸಿ ಸ್ಥಳೀಯ ಜನಪ್ರತಿನಿಧಿಗಳಿಗೂ ಮಾಹಿತಿ ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ಸಂದರ್ಭ ತಂಬಾಕು ಮಂಡಳಿ ಪ್ರಾದೇಶಿಕ ವ್ಯವಸ್ಥಾಪಕ ಎಂ.ಲಕ್ಷ್ಮಣ್ ರಾವ್, ಐಟಿಸಿ ಕಂಪನಿ ಅಧಿಕಾರಿ ಪೂರ್ಣೇಶ್, ತಂಬಾಕು ಹರಾಜು ಅಧೀಕ್ಷಕರಾದ ಪ್ರಭಾಕರನ್, ಶಂಭುಲಿಂಗೇಗೌಡ, ರಾಮ್ ಮೋಹನ್ ಸೂರಿ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್. ರವಿ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಸಿ ಕೃಷ್ಣ, ಸದಸ್ಯ ಪ್ರಕಾಶ್ ಸಿಂಗ್, ರೈತ ಮುಖಂಡ ಪ್ರಕಾಶ್ ರಾಜೇಅರಸ್, ಮಹೇಶ್, ಗೋವಿಂದೇಗೌಡ, ಅಶೋಕ್, ರಘುನಾಥ್, ಗಿರೀಶ್ ಮತ್ತಿತರಿದ್ದರು.

Sneha Gowda

Recent Posts

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

17 seconds ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

25 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

38 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago