ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ಜಾಮೀನು ಮಂಜೂರಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಭಾಕರ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಇಂದು ಜಾಮೀನು ನೀಡಿ ಆದೇಶಿಸಿದೆ. ಸ್ಥಳೀಯ ಇಬ್ಬರು ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಭಟ್ ಹೇಳಿದ್ದರು.
ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್ಐಆರ್ ದಾಖಲಾಗಿತ್ತು.