News Karnataka Kannada
Sunday, April 28 2024
ಮಂಡ್ಯ

ಆರ್.ಅಶೋಕ್, ಶಾಸಕ ಅಶ್ವತ್ಥನಾರಾಯಣ ಪೊಲೀಸ್ ವಶಕ್ಕೆ !

ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಹನುಮ ಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿರುವ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.
Photo Credit : News Kannada

ಮಂಡ್ಯ:  ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಹನುಮ ಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿರುವ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಕೆರಗೋಡು ಗ್ರಾಮದ ವಿವಾದಿತ ಸ್ಥಳಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಶಾಸಕ ಅಶ್ವತ್ಥನಾರಾಯಣ ಭೇಟಿ ನೀಡಿದ್ದು, ಹನುಮ ಧ್ವಜ ತೆರವು ಮಾಡಿದ್ದಕ್ಕೆ ಪ್ರತಿಭಟನೆ ನಡೆಸಿದ್ದಾರೆ.

ಆರ್.ಅಶೋಕ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಧ್ವಜಸ್ತಂಭದತ್ತ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರ್.ಅಶೋಕ್, ಅಶ್ವತ್ಥನಾರಾಯಣ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು