News Karnataka Kannada
Tuesday, April 30 2024
ಮಂಡ್ಯ

ಮಂಡ್ಯ, ಕೋಲಾರದಲ್ಲಿ ಇಂದು ರಾಹುಲ್‌ ಗಾಂಧಿ ಅಬ್ಬರ

Raga
Photo Credit : NewsKarnataka

ಮಂಡ್ಯ: ಪ್ರಧಾನಿ ಮೋದಿ ಅವರ ಮೈಸೂರು, ಮಂಗಳೂರು ಭೇಟಿ ಬೆನ್ನಲ್ಲೇ ಪ್ರಸಕ್ತ ಲೋಕಸಭೆ ಚುನಾವಣೆ ಪ್ರಚಾರದ ಸಲುವಾಗಿ ಇದೇ ಮೊದಲ ಬಾರಿಗೆ ಬುಧವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಹಾಗೂ ಕೋಲಾರದ ಮಾಲೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ ಮಂಡ್ಯ ನಗರಕ್ಕೆ ಆಗಮಿಸಲಿರುವ ರಾಹುಲ್‌ಗಾಂಧಿ ಅವರು 2 ಗಂಟೆಗೆ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ ‘ಪ್ರಜಾಧ್ವನಿ-2’ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿ ಹಲವು ರಾಜ್ಯ ನಾಯಕರು ಸಾಥ್ ಅವರಿಗೆ ನೀಡಲಿದ್ದಾರೆ.

ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ರಾಜ್ಯದ ಮಟ್ಟಿಗೆ ತೀವ್ರ ಹಣಾಹಣಿ ಏರ್ಪಟ್ಟಿರುವ ಮಂಡ್ಯ ಕ್ಷೇತ್ರದಲ್ಲೇ ರಾಹುಲ್‌ಗಾಂಧಿ ಅವರು ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸುತ್ತಿದ್ದಾರೆ. ಬಳಿಕ ಮಂಡ್ಯದಿಂದ ನೇರವಾಗಿ ಹೊಸಕೋಟೆಗೆ ಹೆಲಿಕಾಪ್ಟರ್‌ ಮೂಲಕ ತೆರಳಲಿರುವ ಅವರು ಮಾಲೂರಿನ ಚೊಕ್ಕಂಡಹಳ್ಳಿ ಗೇಟ್‌ ಬಳಿ ನಡೆಯಲಿರುವ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಕೆ.ಎಚ್.ಮುನಿಯಪ್ಪ ಹಾಗೂ ಕೆ.ಆರ್‌.ರಮೇಶ್‌ ಕುಮಾರ್ ನಡುವಿನ ಬಣ ತಿಕ್ಕಾಟದಿಂದ ಟಿಕೆಟ್‌ ಆಯ್ಕೆಯಲ್ಲಿ ತೀವ್ರ ಗೊಂದಲ ಉಂಟಾಗಿರುವ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ.ಗೌತಮ್‌ ಪರ ರಾಹುಲ್‌ಗಾಂಧಿ ಮತ ಯಾಚನೆ ಮಾಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು