News Karnataka Kannada
Tuesday, April 30 2024
ಮಂಡ್ಯ

ಮಂಡ್ಯದಲ್ಲಿ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ, ಜಿಲ್ಲಾಧಿಕಾರಿಯವರಿಂದ ಮಾಹಿತಿ

Registration for copra purchase begins in Mandya
Photo Credit : By Author

ಮಂಡ್ಯ: 2023 ನೇ ಸಾಲಿನ ಕನಿಷ್ಟ ಬೆಂಬಲ ಯೋಜನೆಯಡಿಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಸರ್ಕಾರವು ಪ್ರತಿ ಕ್ವಿಂಟಾಲೆಗೆ 11750 ರೂ. ಕನಿಷ್ಟ ಬೆಂಬಲ ಬೆಲೆ ಘೋಷಿಸಿದ್ದು, ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ಹೆಸರು ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಹೆಚ್. ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರೈತರಿಂದ ನೇರವಾಗಿ ಉಂಡೆ ಕೊಬ್ಬರಿಯನ್ನು ಖರೀದಿಸುವ ಸಂಬಂಧ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಆದೇಶದಂತೆ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ರೈತರಿಂದ ನೇರವಾಗಿ ನಾಫೆಡ್ ಸಂಸ್ಥೆಯ ಕರ್ನಾಟಕ ಸರ್ಕಾರದ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದವರು ಖರೀದಿ ಪ್ರಕ್ರಿಯೆ ನಡೆಸಲಿದ್ದು, ನಾಗಮಂಗಲ ತಾಲ್ಲೂಕಿನ ಕದಬಳ್ಳಿ ಹಾಗೂ ಕೆ.ಆರ್.ಪೇಟೆ ಎ.ಪಿ.ಎಂ.ಸಿ ಆವರಣದಲ್ಲಿ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದರು.

ಪ್ರತಿ ರೈತರಿಂದ ಗರಿಷ್ಟ20 ಕ್ವಿಂಟಾಲ್ ಉಂಡೆ ಕೊಬ್ಬರಿಯನ್ನು ಪ್ರತಿ ಎಕರೆಗೆ 6 ಕ್ವಿಂಟಾಲ್ ನಂತೆ ಖರೀದಿಸಬೇಕು. ರೈತರ ನೊಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 6 ತಿಂಗಳ ವರೆಗೆ ನಿಗದಿಪಡಿಸಿಲಾಗಿದೆ. ನೊಂದಣಿ ಹಾಗೂ ಖರೀದಿಗೆ ಬೇಕಿರುವ ಸಿಬ್ಬಂದಿಗಳನ್ನು ನೇಮಕ ಮಾಡಲು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ರೈತರಿಗೆ ನೆರವಾಗುವ ರೀತಿ ಸಹಾಯವಾಣಿ ಪ್ರಾರಂಭಿಸುವುದು ಸೂಕ್ತ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಪ್ರಮುಖವಾಗಿ ಜಿಲ್ಲೆಯ ಕೆ.ಆರ್ ಪೇಟೆ ಹಾಗೂ ನಾಗಮಂಗಲ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದ ತೆಂಗಿನ ಮರಗಳಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 68466 ಹೆಕ್ಟೇರ್ ಪ್ರದೇಶದಲ್ಲಿ ತೆಂಗಿನ ಮರಗಳಿದ್ದು, ಒಟ್ಟು ಉತ್ಪಾದನೆ 5096 ಲಕ್ಷ ಕಾಯಿಕಳಾಗಿರುತ್ತವೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಎಪಿಎಂಸಿ ಉಪ ನಿರ್ದೆಶಕ ಕೆ.ಶ್ರೀನಿವಾಸ ರೆಡ್ಡಿ, ಕೆ.ಆರ್ ಪೇಟೆ ಎಪಿಎಂಸಿ ಕಾರ್ಯದರ್ಶಿ ರಫಿಕ್ ಅಹಮ್ಮದ್, ನಾಗಮಂಗಲ ಎಪಿಎಂಸಿಯ ಸೋಮಶೇಖರ್, ರಜೀತ್, ನಫೇಢ್ ಸಂಸ್ಥೆಯ ಸತೀಶ್, ತೋಟಗಾರಿಕೆ ಇಲಾಖೆಯ ಚಂದು ಸೇರಿದಂತೆ ಇನ್ನಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು