Categories: ಮಂಡ್ಯ

ಮಂಡ್ಯದಲ್ಲಿ ಕಮಲ ಅರಳಿಸುವ ಸಂಕಲ್ಪ- ಡಾ.ನಾರಾಯಣಗೌಡ

ಮಂಡ್ಯ: ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಭದ್ರಕೋಟೆಯನ್ನು ಒಡೆದು ನುಚ್ಚು ನೂರು ಮಾಡಿ ಕನಿಷ್ಟ 5 ಸ್ಥಾನಗಳಲ್ಲಾದರೂ ಕಮಲವನ್ನು ಅರಳಿಸಬೇಕು ಎಂದು ಸಂಕಲ್ಪಮಾಡಿರುವುದಾಗಿ ಯುವ ಸಬಲೀಕರಣ, ಕ್ರೀಡೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಹೇಳಿದರು.

ಕೆ.ಆರ್.ಪೇಟೆ ಪಟ್ಟಣದ ಭಾರತೀಯ ಜನತಾ ಪಕ್ಷದ ಕಛೇರಿಯಲ್ಲಿ ನಡೆದ ತಾಲ್ಲೂಕು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ, ಇಲ್ಲಿ ಕಮಲ ಅರಳಲು ಸಾಧ್ಯವಿಲ್ಲ ಎಂದು ಟೀಕೆ ಮಾಡುತ್ತಿದ್ದ ಟೀಕಾಕಾರರಿಗೆ ಕಳೆದ ಉಪಚುನಾವಣೆಯಲ್ಲಿ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಮೂಲಕ ಕಮಲವನ್ನು ಅರಳಿಸಿ ಜಿಲ್ಲೆಯಲ್ಲಿ ಹೊಸ ಇತಿಹಾಸವನ್ನು ನಿರ್ಮಾಣ ಮಾಡಿದ್ದೇನೆ.

2023ರಲ್ಲಿ ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 7 ಸ್ಥಾನಗಳ ಪೈಕಿ ಕನಿಷ್ಟ 5 ಸ್ಥಾನಗಳಲ್ಲಾದರೂ ಕಮಲವನ್ನು ಅರಳಿಸಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ನಿರ್ಧಾರ ಮಾಡಿರುವ ನಾನು. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವನಾದರೂ ಮಂಡ್ಯ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ್ದೇನೆ. ಬಿಜೆಪಿ ಪಕ್ಷವು ಮಂಡ್ಯ ಜಿಲ್ಲೆಯಲ್ಲಿ ಸುಭದ್ರವಾಗಿದ್ದು, ದೇಶದ ಗೃಹ ಸಚಿವರಾದ ಅಮಿತ್‌ಷಾ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಗೆ ನಿರೀಕ್ಷೆಗೂ ಮೀರಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಭಾಗವಹಿಸಿರುವುದು ಜೆಡಿಎಸ್ ಮತ್ತು ಕಾಂಗ್ರೇಸ್ ಪಕ್ಷಗಳಿಗೆ ನಡುಕ ಉಂಟು ಮಾಡಿದೆ ಎಂದರು.

ಭಾರತೀಯ ಜನತಾ ಪಕ್ಷವು ನಿಷ್ಠಾವಂತ ಕಾರ್ಯಕರ್ತರ ಪಡೆಯನ್ನು ಹೊಂದಿದೆ. ರಾಜಕೀಯ ವಿಶ್ಲೇಷಕರು, ಹಾಗೂ ರಾಜಕೀಯ ಪಂಡಿತರ ಲೆಕ್ಕಾಚಾರಗಳು ತಲೆಕೆಳಗಾಗುವ ರೀತಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷವು ಭಾರೀ ಬಹುಮತದಿಂದ ಮತ್ತೇ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿದಂದಲೂ ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದರು.

ಒಂದು ಕಾಲದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಶಾಸಕರಿಲ್ಲವಲ್ಲ ಎಂಬಾ ಕೊರಗು ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾಡುತ್ತಿತ್ತು. ಅವರ ಕೊರಗನ್ನು ನನ್ನ ಗೆಲುವಿನ ಮೂಲಕ ನೀಗಿಸಿದ್ದೇನೆ. ಈ ಬಾರಿಯ ವಿಧಾನ ಸಭಾ ಚುನಾವಣೆಯು ನನ್ನ ಪಾಲಿಗೆ ಮಾಡು ಇಲ್ಲವೇ ಮಡಿ ಎಂಬಾ ಹೋರಾಟವಾಗಿದೆ. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡುತ್ತಿರುವ ನಾನು ಉಪಚುನಾವಣೆಯ ಸಂದರ್ಭದಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇನೆ.

ರಾಜ್ಯದ ಬಿಜೆಪಿ ಸರ್ಕಾರವು ಹಲವು ಕೊಡುಗೆಗಳನ್ನು ಎಲ್ಲಾ ಜನಾಂಗ ಗಳಿಗೆ ನೀಡುವ ಮೂಲಕ ಸರ್ವ ಜನಾಂಗದ ಶಾಂತಿಯ ತೋಟವನ್ನು ನಿರ್ಮಿಸಿದೆ. ಆದ್ದರಿಂದ ವಿರೋಧಪಕ್ಷಗಳು ಎಷ್ಟೇ ಬೊಬ್ಬೆ ಹೊಡೆದು ಅಪಪ್ರಚಾರ ನಡೆಸಿದರು, ಅಮೀತ್‌ಷಾ ನೇತೃತ್ವದಲ್ಲಿ ನಡೆಯಲಿರುವ ರಾಜಕೀಯದ ಚದುರಂಗದಾಟದಲ್ಲಿ ಪಕ್ಷದ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

16 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

30 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

42 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

58 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago