ಮಂಡ್ಯ

ಜನಮನಸೆಳೆದ ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿ

ಮಂಡ್ಯ: ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ರವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಅಗ್ರ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ತಾಯಿ ಚಾಮುಂಡೇಶ್ವರಿ ಅಂಬಾರಿ ಹೊತ್ತು ಮಹೇಂದ್ರ ಮುಂದೆ ಸಾಗಿತು. ವರಲಕ್ಷ್ಮೀ ಹಾಗೂ ವಿಜಯ ಜೊತೆಗೆ ಹೆಜ್ಜೆ ಹಾಕಿತು. ಇದಕ್ಕೆ ಮೆರವಣಿಗೆಯಲ್ಲಿ ಪೊಲೀಸ್ ಬ್ಯಾಂಡ್, ಅಶ್ವದಳ, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ಕಂಸಾಳೆ, ಡೊಳ್ಳು ಕುಣಿತ, ಸೋಮನ ಕುಣಿತ, ಒನಕೆ ಕುಣಿತ, ರಂಗದ ಕುಣಿತ, ಕೋಳಿ ನೃತ್ಯ, ಕಹಳೆ, ನಾಸಿಕ್ ಡೋಲ್, ದೊಡ್ಡ ಆಂಜನೇಯ, ಪಟ್ಟದ ಕುಣಿತ, ಯಕ್ಷಗಾನ ನೃತ್ಯ, ಹುಲಿವೇಷ, ಹಾಲಕ್ಕಿ ಸುಗ್ಗಿ ಕುಣಿತ, ಕೇರಳ ಚಂಡೆ, ಜಗ್ಗಲಿಗೆ, ಮಹಿಳಾ ಡೊಳ್ಳು ಕುಣಿತ ಕಲಾ ತಂಡಗಳು ವಿಶೇಷ ಮೆರಗು ನೀಡಿದವು.

ಸ್ಥಬ್ಧ ಚಿತ್ರಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷಿ ಯೋಜನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಸ್ಥಬ್ದ ಚಿತ್ರ, ಅರೋಗ್ಯ ಇಲಾಖೆ ವತಿಯಿಂದ ಹೃದಯಘಾತ ತ್ವರಿತ ಚಿಕಿತ್ಸೆಗೆ ಸ್ಟೆಮಿ ಯೋಜನೆ ಕುರಿತು ಸ್ಥಬ್ದ ಚಿತ್ರ, ರೇಷ್ಮೆ ಇಲಾಖೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ವತಿಯಿಂದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಸ್ಥಬ್ದ ಚಿತ್ರ ಪ್ರದರ್ಶಿಸಲಾಯಿತು.

ದಸರೆಯ ಪೂಜಾ ಕೈಂಕರ್ಯದ ವೇಳೆಯಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ, ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago