ಮಂಡ್ಯ: ನಾನು ಯಾವತ್ತೂ ನನಗಾಗಿ ಟಿಕೆಟ್ ಕೊಡಿ ಎಂದು ಲಾಬಿ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ. ಬಿಜೆಪಿಗೆ ಮಂಡ್ಯ ಉಳಿಸಿಕೊಂಡರೆ ಪಕ್ಷ ಕಟ್ಟಲು ಸಹಕಾರಿಯಾಗಲಿದೆ. ಬಿಜೆಪಿ ಪಕ್ಷ ಸೇರ್ಪಡೆಗೆ ತಾಂತ್ರಿಕವಾಗಿ ಅಡ್ಡಿಯಾಗಿದೆ. ಆ ಕಾರಣಕ್ಕಾಗಿ ನಾನು ಬಾಹ್ಯ ಬೆಂಬಲ ನೀಡಿದ್ದು, ಇದು ಬಿಜೆಪಿ ರಾಷ್ಟ್ರೀಯ ನಾಯಕರೆ ನನಗೆ ಹೇಳಿದ್ದಾರೆ. ನಾನು ಮೋದಿ ಹಾಗೂ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದಾಗಲೂ ಮಂಡ್ಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾತನಾಡಿದ್ದೇನೆ. ಬಿಜೆಪಿಯೇ ಮಂಡ್ಯ ಟಿಕೆಟ್ ಉಳಿಸಿಕೊಳ್ಳಬೇಕು ಎಂದು ಕೇಳಿದ್ದಾರೆ. ನನಗೆ ಟಿಕೆಟ್ ನೀಡಬೇಕೆಂದು ನಾನು ಲಾಬಿ ಮಾಡಿಲ್ಲ ಎಂದು ಹೇಳಿದರು.