News Karnataka Kannada
Sunday, April 28 2024
ಮಂಡ್ಯ

ಬಿಜೆಪಿ ಟಿಕೆಟ್‌ ಸಿಗದಿದ್ದಲ್ಲಿ ಸ್ವತಂತ್ರವಾಗಿ ಸ್ಪರ್ಧೆ: ಸುಮಲತಾ

Sumalatha to contest independently if she doesn't get BJP ticket
Photo Credit : News Kannada

ಮದ್ದೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದೆ ಸುಮಲತಾ ಅಂಬರೀಷ್‌ ತಿಳಿಸಿದ್ದಾರೆ.

ಮಂಡ್ಯ ನನ್ನ ಕರ್ಮಭೂಮಿ, ಈ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುವುದು ನನ್ನ ಬಯಕೆ ಎಂದರು.
ನನ್ನ ಸ್ಪರ್ಧೆ ಸಂಬಂಧ ಹರಡಿರುವ ವದಂತಿಗಳಿಗೆ ಬೆಂಬಲಿಗರೂ ಸೇರಿ ಯಾರೂ ಕಿವಿಗೊಡಬಾರದು. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆನ್ನುವುದು ನನ್ನ ಬಯಕೆ. ಈ ಬಗ್ಗೆ ಮಾರ್ಚ್ ನಂತರ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.

ಮಂಡ್ಯದಲ್ಲಿ ನನ್ನ ಪತಿ ಅಂಬರೀಷ್‌ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಾಕಷ್ಟು ಜನಪ್ರಿಯ ಕೆಲಸಗಳನ್ನು ಮಾಡಿ ಜನಮೆಚ್ಚುಗೆ ಪಡೆದುಕೊಂಡಿದ್ದಾರೆ. ಬಿಜೆಪಿಗೆ ಬೆಂಬಲ ನೀಡಿದ್ದೇನೆಯೇ ಹೊರತು ಪಕ್ಷದ ತೀರ್ಮಾನಗಳಲ್ಲಿ ಭಾಗಿಯಾಗಿಲ್ಲ. ನಾನಿನ್ನೂ ಸ್ವತಂತ್ರ ಲೋಕಸಭಾ ಸದಸ್ಯೆ. ನಂತರದ ದಿನಗಳಲ್ಲಿ ನನ್ನ ಸ್ಪಷ್ಟ ನಿರ್ಧಾರ ಪ್ರಕಟಿಸುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು