Categories: ಮಂಡ್ಯ

ಕೆ.ಆರ್.ಪೇಟೆ ಚೆಕ್‌ಪೋಸ್ಟ್‌ ಗಳಲ್ಲಿ ತಹಶೀಲ್ದಾರ್ ಅವರಿಂದ ಪರಿಶೀಲನೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಸನ್ನದ್ದವಾಗಿರುವ ಕೆ.ಆರ್.ಪೇಟೆ ತಹಶೀಲ್ದಾರ್ ಡಾ.ಲೋಕೇಶ್ ತಾಲ್ಲೂಕಿನ ವ್ಯಾಪ್ತಿಯ ಚೆಕ್‌ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆ.ಆರ್.ಪೇಟೆ ತಾಲೂಕಿನ ಮೈಸೂರು ಜಿಲ್ಲಾ ವ್ಯಾಪ್ತಿಯ ಭೇರ್ಯ ರಸ್ತೆಯ ಸಿಂಗನಹಳ್ಳಿ ಗ್ರಾಮ, ಚನ್ನರಾಯಪಟ್ಟಣ ರಸ್ತೆಯ ಗಡಿ ಗ್ರಾಮವಾದ ಆನೆಗೋಳ ಗ್ರಾಮ ಹಾಗೂ ಶ್ರವಣಬೆಳಗೊಳ ರಸ್ತೆಯ ಅಘಲಯ ಗ್ರಾಮದಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಹಣಕಾಸು, ಮದ್ಯ ಸೇರಿದಂತೆ ಯಾವುದೇ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ಮಾಡುವುದನ್ನು ತಡೆಯಲು ಹದ್ದಿನ ಕಣ್ಣು ಇಡಲಾಗಿದೆ. ಬಿಗಿ ಪೊಲೀಸ್ ಭದ್ರತೆ ಕೈಗೊಂಡು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಡಾ. ಲೋಕೇಶ್ ಮಾಹಿತಿ ನೀಡಿದ್ದಾರೆ.

ಭಾರತ ದೇಶದ ಚುನಾವಣಾ ಆಯೋಗದ ನಿರ್ದೇಶನದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೆ.ಆರ್.ಪೇಟೆ ತಾಲ್ಲೂಕಿನ 261 ಮತಗಟ್ಟೆಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. 1500 ಜನ ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ.

ಕೆ.ಆರ್.ಪೇಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಾನೂನು ಬಾಹಿರವಾದ ಚಟುವಟಿಕೆಗಳು  ನಡೆಯುತ್ತಿರುವುದು ಕಂಡು ಬಂದರೆ ತಾಲೂಕು ಕಚೇರಿಗೆ ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ತಾಲ್ಲೂಕು ಆಡಳಿತದೊಂದಿಗೆ ಕೈಜೋಡಿಸಿ ಸಹಕರಿಸಬೇಕೆಂದು ಸಹ ಚುನಾವಣಾಧಿಕಾರಿಗಳೂ ಆಗಿರುವ ತಹಶೀಲ್ದಾರ್ ಡಾ. ಲೋಕೇಶ್ ತಿಳಿಸಿದರು. ಈ ಸಂಧರ್ಭದಲ್ಲಿ ಚುನಾವಣಾ ಶಾಖೆಯ ಸಿಬ್ಬಂದಿ ಹಾಜರಿದ್ದರು.

Ashika S

Recent Posts

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

6 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

11 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

24 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

30 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

33 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

48 mins ago