News Karnataka Kannada
Tuesday, April 23 2024
Cricket
ಮಂಡ್ಯ

ಮತಗಟ್ಟೆಗಳಿಗೆ ತಹಶೀಲ್ದಾರ್ ಭೇಟಿ: ಪರಿಶೀಲನೆ

ಮಂಡ್ಯ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮತಗಟ್ಟೆಗಳ ಕೇಂದ್ರಗಳನ್ನು ಸಹ ಚುನಾವಣಾಧಿಕಾರಿ ತಹಶೀಲ್ದಾರ್ ಡಾ.ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Photo Credit : By Author

ಕೃಷ್ಣರಾಜಪೇಟೆ: ಮಂಡ್ಯ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮತಗಟ್ಟೆಗಳ ಕೇಂದ್ರಗಳನ್ನು ಸಹ ಚುನಾವಣಾಧಿಕಾರಿ ತಹಶೀಲ್ದಾರ್ ಡಾ.ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ತಹಶೀಲ್ದಾರ್ ಡಾ.ಲೋಕೇಶ್ ಮತಗಟ್ಟೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮತಗಟ್ಟೆಗಳು ವಿದ್ಯುತ್ ಸಂಪರ್ಕ ಹೊಂದಿರಬೇಕು. ಶೌಚಾಲಯ ಸೇರಿದಂತೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಹೊಂದಿರಬೇಕು. ಮತಗಟ್ಟೆಯ ವಾತಾವರಣವು ನಿರ್ಮಲವಾಗಿದ್ದು ಪರಿಶುದ್ಧವಾಗಿರಬೇಕು. ಮತದಾನ ಕೇಂದ್ರದ ಕಟ್ಟಡದ ಮುಂದೆ ಮತಗಟ್ಟೆ ಸಂಖ್ಯೆ ಹಾಗೂ ಬಿಎಲ್‌ಓ ಗಳ ಹೆಸರನ್ನು ಕಡ್ಡಾಯವಾಗಿ ಬರೆಸಿರಬೇಕು ಎಂದು ನಿರ್ದೇಶನ ನೀಡಿದರು.

ಸಹಚುನಾವಣಾ ಅಧಿಕಾರಿಗಳಾದ ತಹಶೀಲ್ದಾರ್ ಡಾ.ಲೋಕೇಶ್ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಮತಗಟ್ಟೆ ಅಧಿಕಾರಿಗಳು ಸಹಕರಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಕ್ರಮಗಳು ನಡೆಯುತ್ತಿರುವುದು ಕಂಡು ಬಂದರೆ ಪೋಲಿಸರಿಗೆ ಇಲ್ಲವೇ ತಾಲೂಕು ಆಡಳಿತದ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಚುನಾವಣಾ ಶಾಖೆಯ ಸಿಬ್ಬಂದಿ ಹಾಗೂ ಮತಗಟ್ಟೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು