Categories: ಮಂಡ್ಯ

ಕೆಆರ್‌ಎಸ್‌ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಮಂಡ್ಯ: ಪ್ರವಾಸಕ್ಕೆ ಬಂದಿದ್ದ ಮೂವರು ಕೆಆರ್‌ಎಸ್‌ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಕೆಆರ್​ಎಸ್​ ಹಿನ್ನೀರಿನಲ್ಲಿಮುಳುಗಿ ಮೂವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಹರೀಶ್, ನಂಜುಂಡ ಹಾಗೂ ಜ್ಯೋತಿ ಮೃತ ದುರ್ದೈವಿಗಳು. ಮೂವರು ಮೈಸೂರಿನ ಕಾರುಣ್ಯ ಟ್ರಸ್ಟ್ ಸಿಬ್ಬಂದಿಗಳು ಎಂದು ತಿಳಿದುಬಂದಿದೆ.

ಭಾನುವಾರ ರಜೆ ಹಿನ್ನೆಲೆಯಲ್ಲಿ 25 ಮಂದಿ ಸಿಬ್ಬಂದಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಕೆಆರ್​ಎಸ್​ ಹಿನ್ನೀರಿನಲ್ಲಿ ಆಟವಾಡುವಾಗ ಮುಳುಗಿ ಮೃತಪಟ್ಟಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಮೂವರ ಪೈಕಿ ಇಬ್ಬರು ಮೃತದೇಹ ಹೊರಗೆ ತೆಗೆದಿದ್ದು, ಮತ್ತೊಬ್ಬನ ಮೃದದೇಹಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಇವರು ಮೈಸೂರಿನಿಂದ ಪ್ರವಾಸಕ್ಕೆ ಬಂದಿದ್ದರು. ಎನ್‌ಜಿಒ ಕಡೆಯಿಂದ 20ಕ್ಕೂ ಹೆಚ್ಚು ಜನರು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಕೆಲವರು ಹಿನ್ನೀರಿನಲ್ಲಿ ನೀರಿಗೆ ಇಳಿದಿದ್ದಾರೆ. ಕೆಲವರು ಈಜುತ್ತಿದ್ದರು. ಆಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ರಕ್ಷಣೆ ಮಾಡಲು ಪ್ರಯತ್ನಿಸಲಾಯಿತಾದರೂ ಸಾಧ್ಯವಾಗಲಿಲ್ಲ ಎನ್ನಲಾಗಿದೆ.

Gayathri SG

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

12 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

23 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

54 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago