News Karnataka Kannada
Monday, May 20 2024
ಮಂಡ್ಯ

ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವು

ಶ್ರೀರಂಗಪಟ್ಟಣ  ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ  ನಡೆದಿದೆ.
Photo Credit : NewsKarnataka

ಮಂಡ್ಯ: ಶ್ರೀರಂಗಪಟ್ಟಣ  ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ  ನಡೆದಿದೆ.

ಮೃತ ಮಕ್ಕಳನ್ನು  ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಎಂದು ಗುರುತಿಸಲಾಗಿದೆ.

ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್‌ಕ್ರೀಂ ‌ತಿಂದಿದ್ದರು. ಐಸ್‌ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ.

ಶವಗಳನ್ನು ಮಿಮ್ಸ್ ಆಸ್ಪತ್ರೆಗೆ  ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು