Categories: ಮಂಡ್ಯ

ಕೆರೆ ಒತ್ತುವರಿ ವಿಚಾರಕ್ಕೆ ಗ್ರಾಮಸ್ಥರ ನಡುವೆ ಮಾರಾಮಾರಿ

ಕೆ.ಆರ್ ಪೇಟೆ: ಕೆರೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದು ಆರು ಮಂದಿ ಆಸ್ಪತ್ರೆಗೆ ಸೇರಿದ ಘಟನೆ ತಾಲೂಕಿನ ವಡ್ಡರಹಳ್ಳಿ ಹಾಗೂ ಹೆಗ್ಗಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ವಡ್ಡರಹಳ್ಳಿ ಗ್ರಾಮದ ಸರಹದ್ದಿಗೆ ಸೇರಿದ 23 ಎಕರೆ 3೦ಗುಂಟೆ ವಿಸ್ತೀರ್ಣದ ಕೆರೆಯ ಹೂಳೆತ್ತಿ ಅಭಿವೃದ್ಧಿಪಡಿಸುವ ಕಾಮಗಾರಿಯು 75 ಲಕ್ಷರೂ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ವಿಶೇಷ ಅನುದಾನದಲ್ಲಿ ನಡೆಯುತ್ತಿದೆ.

ಆದರೆ ಕೆರೆಯ ಒತ್ತುವರಿದಾರರು ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಕಾರ್ಯಕರ್ತರಾಗಿದ್ದು ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ಪರಸ್ಪರ ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ಈ ನಡುವೆ ವಡ್ಡರಹಳ್ಳಿ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಯ ವೀಕ್ಷಣೆ ನಡೆಸಿದ ತಹಶೀಲ್ದಾರ್ ನಿಸರ್ಗಪ್ರಿಯ ಕೆರೆಯ ಒತ್ತುವರಿದಾರರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೇ ತೆರವು ಕಾರ್ಯಾಚರಣೆ ನಡೆಸಲಾಗುವುದು. ಇದರಲ್ಲಿ ಯಾವುದೇ ಪ್ರಭಾವಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಠಪಡಿಸಿದ್ದರು.

ಅದರಂತೆ ಕೆರೆಯ ಅಭಿವೃದ್ಧಿ ಕಾಮಗಾರಿ ನಡೆಸುವಂತೆ ಸೂಚಿಸಿ ತುರ್ತು ಕಾರ್ಯನಿಮಿತ್ತ ಬೇರೆಡೆಗೆ ತೆರಳಿದ ನಂತರ ಕೆರೆಯ ಅಂಗಳದ ಅಕ್ಕಪಕ್ಕದ ಜಮೀನುಗಳಲ್ಲಿ ನೆರೆದಿದ್ದ ಎರಡೂ ಗ್ರಾಮಗಳ ಗ್ರಾಮಸ್ಥರು ಸೇರಿದಂತೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಆರೋಪ, ಪ್ರತ್ಯಾರೋಪ ಮಾಡಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಜಗಳವನ್ನು ಬಿಡಿಸಿ ಶಾಂತಿ ಕಾಪಾಡಲು ಹೋದ ಎರಡೂ ಗ್ರಾಮಗಳ ಹಿರಿಯರಿಗೆ ಏಟುಗಳು ಬಿದ್ದಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದೆ.

ಕಿಕ್ಕೇರಿ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ರೇವತಿ, ಗ್ರಾಮಾಂತರ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಜಗದೀಶ್ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಎರಡೂ ಗ್ರಾಮಗಳಲ್ಲಿಯೂ ಮುಂಜಾಗ್ರತಾ ಕ್ರಮವಾಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago