Categories: ಮಂಡ್ಯ

ಮಂಡ್ಯದಲ್ಲಿ ಮಳೆಗಾಗಿ ಕಪ್ಪೆಗಳ ಮದುವೆ ಮಾಡಿಸಿದ ಗ್ರಾಮಸ್ಥರು

ಮಂಡ್ಯ: ಬರ ತೀವ್ರವಾಗಿ ಕಾಡುತ್ತಿದ್ದು, ಈ ಸಮಯದಲ್ಲಿ ಮಳೆ ಬರಬಹುದೆಂದು ಕಾದು ಕುಳಿತಿರುವ ಜನ ಮಳೆ ಬಾರದೆ ತಲೆಸುಡುವ ಬಿಸಿಲಿಗೆ ಸಿಲುಕಿ ಬಸವಳಿದಿದ್ದಾರೆ. ನದಿ ಮೂಲಗಳು ಬತ್ತಿವೆ. ಕೆರೆಗಳಲ್ಲಿ ನೀರು ಆರಿದ್ದು ಮೈದಾನದಂತಾಗಿವೆ. ಊರುಗಳಲ್ಲಿ ಸಿಕ್ಕ, ಸಿಕ್ಕ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿ ಮಳೆಗಾಗಿ ಮಾಡದ ಪ್ರಾರ್ಥನೆಗಳಿಲ್ಲ. ಆದರೆ ವರುಣ ಅದ್ಯಾಕೋ ಕೃಪೆ ತೋರಿದಂತೆ ಕಾಣುತ್ತಿಲ್ಲ.

ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಮುಂದಿನ ದಿನಗಳಲ್ಲಿ ಎದುರಾಗಲಿರುವ ಭೀಕರತೆಯನ್ನು ಯೋಚಿಸಿ ಜನ ಬೆಚ್ಚಿ ಬೀಳುತ್ತಿದ್ದಾರೆ. ಈಗಾಗಲೇ ಪ್ರಾಣಿ, ಪಕ್ಷಿಗಳಿಗೂ ಕುಡಿಯಲು ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಜನ ಕೂಡ ಬೇರೆ ದಾರಿ ಕಾಣದೆ ತಮಗೆ ತೋಚಿದ ಪೂಜೆ ಪುರಸ್ಕಾರಗಳನ್ನು ಮಾಡುತ್ತಿದ್ದಾರೆ. ಈ ನಡುವೆ  ಜಿಲ್ಲೆಯ  ಭಾರತಿ ನಗರದ ಸಮೀಪದ ಕೆ.ಪಿ ದೊಡ್ಡಿಯ ಗ್ರಾಮಸ್ಥರು ಹಾಗೂ ಯುವಕರು ಕಪ್ಪೆ ಮದುವೆ ಮಾಡುವ ಮೂಲಕ ವರುಣನಿಗಾಗಿ ವಿಭಿನ್ನ ಪ್ರಾರ್ಥನೆ ಸಲ್ಲಿಸಿದ್ದಾರೆ.

ಕಪ್ಪೆಗಳನ್ನು ತಂದು ಅವುಗಳಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿಸಿದ್ದು, ಈ ಸಂಬಂಧ ಗ್ರಾಮದ ದೇಗುಲದಲ್ಲಿ ವಿಶೇಷ ಪೂಜೆಯನ್ನು ನಡೆಸಲಾಗಿದೆ ಆ ನಂತರ ಮದುವೆಗೆ ಆಗಮಿಸಿದ  ಕೆ.ಪಿ ದೊಡ್ಡಿ ಹಾಗೂ ಮಣಿಗೆರೆ ಹಾಗೂ ಸುತ್ತಮುತ್ತಲಿನ ಸುಮಾರು 500 ಕ್ಕೂ ಹೆಚ್ಚಿನ ಜನರು ಅನ್ನಸಂತರ್ಪಣೆ ಮಾಡಲಾಗಿದೆ. ಸದ್ಯ ಕಪ್ಪೆ ಮದುವೆ ಬಳಿಕವಾದರೂ ಮಳೆ ಬರುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Ashika S

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

23 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

37 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

52 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 hours ago