ಮಂಡ್ಯ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶ್ರೀಕ್ಷೇತ್ರ ಆದಿಚುಂಚನಗಿರಿ ಯದುವೀರ್ ಭೇಟಿ ನೀಡಿ, ಶ್ರೀ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಯದುವೀರ್ ಆಗಮನದ ವೇಳೆ ಪೀಠಾಧಿಪತಿ ಶ್ರೀ ನಿರ್ಮಲಾನಂದ ಸ್ವಾಮೀಜಿ ವಿಶೇಷ ಪೂಜಾ ಕೈಂಕರ್ಯ ನಡೆಸಿದರು.
ಯದುವೀರ್ಗೆ ದೇಗುಲದಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ದೇವರ ದರ್ಶನದ ಬಳಿಕ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು.