ಮೈಸೂರು: 7 ನೇ ತರಗತಿ ವಿದ್ಯಾರ್ಥಿನಿಗೆ ವಿವಾಹ ನೆರವೇರಿಸಿದ ಹಿನ್ನಲೆ ಬಾಲ್ಯ ವಿವಾಹ ಕಾಯ್ದೆಯಡಿ ಬಾಲಕಿಯ ತಂದೆ, ತಾಯಿ, ಗಂಡ, ಅತ್ತೆ, ವಿರುದ್ದ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ತಾರಾ ಎಂಬುವರು ಪ್ರಕರಣ ದಾಖಲಿಸಿದ್ದಾರೆ. ಬೆಂಗಳೂರು ಮೂಲದ 12 ವರ್ಷದ ಬಾಲಕಿಗೆ ಮೈಸೂರಿನ ಯುವಕನಿಗೆ ನೀಡಿ ಮದುವೆ ಮಾಡಿಕೊಡಲಾಗಿತ್ತು.

ಈ ಮಾಹಿತಿ ಅರಿತ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಯೋಜನೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬಾಲಕಿಯನ್ನ ರಕ್ಷಿಸಿ ಮೈಸೂರಿನ ಬಾಲಮಂದಿರದ ವಶಕ್ಕೆ ನೀಡಿದ್ದಾರೆ.

ಬಾಲಕಿ ತಂದೆ ಸಿದ್ದರಾಜು, ತಾಯಿ ಮಂಗಳಗೌರಿ, ಅಕ್ಕ ಶಾಲಿನಿ, ಬಾಲಕಿಯನ್ನ ಮದುವೆಯಾದ ಪತಿ ಅಪ್ಪು,ಅತ್ತೆ ಮಂಗಳ ವಿರುದ್ದ ಪ್ರಕರಣ ದಾಖಲಾಗಿದೆ. ಬಾಲಕಿ ಬೆಂಗಳೂರಿನ ಶಾಲೆಯೊಂದರಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾಳೆ.