Bengaluru 16°C

ನಂಜನಗೂಡು : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ ಉದ್ಘಾಟನೆ

ನಂಜನಗೂಡು ತಾಲ್ಲೂಕಿನ ಹಳೇಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ,

ನಂಜನಗೂಡು: ನಂಜನಗೂಡು ತಾಲ್ಲೂಕಿನ ಹಳೇಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ದೊಡ್ಡ ಕವಲಂದೆ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮದ ಶ್ರೀ ಮಾರಮ್ಮನವರ ದೇವಾಲಯದ ಆವರಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯನ್ನು ನೇರಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆರ್ ಗಿರೀಶ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.


ಬಳಿಕ ಮಾತನಾಡಿದ ಅವರು, ಸಾಮೂಹಿಕವಾಗಿ ಧಾರ್ಮಿಕ ಆಚರಣೆಗಳನ್ನು ಆಚರಿಸಿ ದೇವರನ್ನು ಪ್ರಾರ್ಥಿಸಿದಾಗ ಯಶಸ್ಸು ಕಾಣುವುದರೊಂದಿಗೆ ಪರಸ್ಪರ ಅನೋನ್ಯತೆಯು ವೃದ್ಧಿಸುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನಿರ್ದೇಶಕ ವಿಜಯಕುಮಾರ್ ನಾಗನಾಳ, ಯೋಜನಾಧಿಕಾರಿ ಧರ್ಮರಾಜ್, ಜನಜಾಗೃತಿ ವೇದಿಕೆಯ ಅಧ್ಯಕ್ಷ ಪ್ರಭುಸ್ವಾಮಿ, ಮುಖಂಡರಾದ ರಂಗನಾಥ್, ಕುಳ್ಳಪ್ಪ, ಮಹದೇವ ಶೆಟ್ಟಿ, ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ ಮೂರ್ತಿ, ಮುಖ್ಯ ಶಿಕ್ಷಕ ಅಂಕಶಟ್ಟಿ, ಪಿಡಿಒ ರಾಜಶೇಖರ್, ಡೈರಿ ಅಧ್ಯಕ್ಷ ಶ್ರೀಕಂಠ ಪ್ರಸಾದ್, ಗ್ರಾಪಂ ಸದಸ್ಯರಾದ ರೇಣುಕಾ, ಗುರುಸ್ವಾಮಿ, ಪ್ರಕಾಶ್, ಚಿನ್ನತಾಯಮ್ಮ, ಪುಷ್ಪ, ವಲಯ ಮೇಲ್ವಿಚಾರಕಿ ಧನಲಕ್ಷ್ಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.


Nk Channel Final 21 09 2023