ಮೈಸೂರು: ನಗರ ಸಿಸಿಬಿ ಪೊಲೀಸರು ನೀಡಿದ ಖಚಿತ ಮಾಹಿತಿ ಆಧಾರದ ಮೇರೆಗೆ ಉದಯಗಿರಿ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿರುವ ಮೂನ್ ಬಕ್ಸ್ ಕೆಫೆ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನ ಬಂಧಿಸಿ 1.20 ಲಕ್ಷ ಮೌಲ್ಯದ 11 ಗ್ರಾಂ 90 ಮಿಲಿ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಅಮೀರ್ ಖಾನ್ ಸೈಯದ್ ಇಮ್ರಾನ್ ಮಹಮ್ಮದ್ ನಬೀಲ್ ಬಂಧಿತ ಆರೋಪಿಗಳು. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮೂವರು ಆರೋಪಿಗಳ ಪೈಕಿ ಅಮೀರ್ ಖಾನ್ ವಿರುದ್ಧ ಈ ಹಿಂದೆ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.