ಮೈಸೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಸಮಿತಿ ವತಿಯಿಂದ ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ಬನ್ನೂರು ಪುರಸಭಾ ಸಭಾಂಗಣದಲ್ಲಿ ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷೇ ಪುಷ್ಪ ಅಮರನಾಥ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಸರ್ಕಾರದ ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಅನ್ನಭಾಗ್ಯ, ಗೃಹ ಜ್ಯೋತಿ ಪಂಚ ಗ್ಯಾರಂಟಿಯ ಉಪಯೋಗ ಮತ್ತು ತೊಂದರೆಗಳ ಬಗ್ಗೆ ಐದು ಗ್ಯಾರಂಟಿಗಳ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಚರ್ಚಿಸಲಾಯಿತು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಾರದು ರಾಜ್ಯದ ಎಲ್ಲರೂ ಇದರ ಫಲಾನುಭವಿಗಳಾಗಬೇಕು ಆ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ ಸರ್ಕಾರ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಪುಷ್ಪ ಅಮರನಾಥ್ ಹೇಳಿದರು.