ನಂಜನಗೂಡು: ಶ್ರೀ ದೇವರ ದಾಸಿಮಯ್ಯ, ಡಾ.ಬಾಬು ಜಗಜೀವನರಾಂ, ಮಹಾವೀರ ಜಯಂತಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಸಭೆ ನಡೆಸಿದರು.
ನಂಜನಗೂಡು ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯುವ ಶ್ರೀ ದೇವರ ದಾಸಿಮಯ್ಯ ಜಯಂತಿ ಮತ್ತು ಡಾ. ಬಾಬು ಜಗಜೀವನ್ ರಾಂ ರವರ ಜಯಂತಿ, ಶ್ರೀ ಮಹಾವೀರ ಜಯಂತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಆಚರಣೆ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ತಹಶೀಲ್ದಾರ್ ಶಿವಕುಮಾರ್, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷೆ ರಿಯಾನಾ ಬಾನು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

