ನಂಜನಗೂಡು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಸರ್ಕಾರಿ ನೌಕರರು ಮತ್ತು ಜನಪ್ರತಿನಿಧಿಗಳಿಗೆ ಏರ್ಪಡಿಸಿರುವ ಎಂಎಲ್ಎ ಕಪ್- 2025 ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು.
ನಂತರ ವೇದಿಕೆ ಕಾರ್ಯಕ್ರಮವನ್ನು ಮಾಜಿ ಸಂಸದ ದಿ. ಆರ್. ಧ್ರುವನಾರಾಯಣ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಾಗೂ ಮಾಧ್ಯಮದವರನ್ನು ಸೇರಿಸಿ ಕ್ರಿಕೆಟ್ ಪಂದ್ಯಾವಳಿಯನ್ನು ತುಂಬಾ ಅಚ್ಚುಕಟ್ಟಾಗಿ ಆಯೋಜನೆ ಮಾಡಿದ್ದೀರಿ.

ತಾಲ್ಲೂಕು ಮಟ್ಟದಲ್ಲಿ ಎಲ್ಲರೂ ಬಂದು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದೀರಿ. ಇಂಥ ಕ್ರೀಡಾ ಕಾರ್ಯಕ್ರಮಗಳು ನಡೆಯುತ್ತಿರಬೇಕು. ಒಂದೆರಡು ದಿನ ಕ್ರೀಡಾಕೂಟದಲ್ಲಿ ಭಾಗಿಯಾಗಿರುವುದರಿಂದ ಉತ್ತಮ ಬಾಂಧವ್ಯ ಬೆಳೆಯುತ್ತದೆ. ಇಂತಹ ಕಾರ್ಯಕ್ರಮಗಳಿಂದ ಇನ್ನು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲು ಪ್ರೇರಣೆಯಾಗುತ್ತದೆ.
ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುವುದಿಲ್ಲ. ಆದರೂ, ಜನ್ಮದಿನದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಿ ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಅಧಿಕಾರಿಗಳನ್ನು ಕ್ರೀಡೆಯಲ್ಲಿ ಭಾಗವಹಿಸುವಂತೆ ಮಾಡಿರುವುದು ಸಂತೋಷ ತಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ ಶಂಕರ್, ದೈಹಿಕ ಶಿಕ್ಷಣ ಉಪನ್ಯಾಸಕ ಎಂ.ಡಿ ಬಾಲರಾಜು, ಕವಲಂದೆ ರಾಹುಲ್, ಮುಳ್ಳೂರು ಸುರೇಶ್,
ಮಾಜಿ ಗ್ರಾ.ಪಂ ಸದಸ್ಯ ಮಹದೇವಸ್ವಾಮಿ, ಹೆಡತಲೆ ರಾಜು, ನಾಗೇಶ್ ರಾಜ್, ದೊರೆಸ್ವಾಮಿ ನಾಯಕ, ಉಪ್ಪಿನಹಳ್ಳಿ ಶಿವಣ್ಣ, ಸೋಮು ಬದನವಾಳು, ಹಲ್ಲರೆ ಮಹದೇವು, ಹಗಿನವಾಳು ಬಸವಣ್ಣ, ನಾಗರಾಜಯ್ಯ, ಕಳಲೆ ರಾಜೇಶ್, ಡಾ.ಶ್ರೀಕಂಠ, ಬಾಲರಾಜ್, ಹೆಗ್ಗಡಹಳ್ಳಿ ಮಹೇಶ್, ಆದರ್ಶ್ ಸೇರಿದಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರೀಡಾಪಟುಗಳು ಭಾಗವಹಿಸಿದ್ದರು.

