ನಂಜನಗೂಡು: ಶಾಲಾ ಮಕ್ಕಳಂತೆ ತಮ್ಮ ಕುತ್ತಿಗೆಗೆ ಟೈ ಧರಿಸಿಕೊಂಡು ಶಾಸಕ ದರ್ಶನ್ ಧ್ರುವನಾರಾಯಣ್ ಖುಷಿ ಪಟ್ಟಿದ್ದಾರೆ.
ನಂಜನಗೂಡು ತಾಲ್ಲೂಕಿನ ಹುಸ್ಕೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ್ ರವರು, ಶಾಲೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಬಳಿಕ ಶಾಲಾ ಮಕ್ಕಳ ಸಮಸ್ಯೆಯನ್ನು ಆಲಿಸಿದರು. ಶಾಲಾ ಮಕ್ಕಳೊಂದಿಗೆ ತಾವು ಕೂಡ ಸಮವಸ್ತ್ರದ ಟೈ ಧರಿಸಿ, ತಮ್ಮ ಬಾಲ್ಯದ ದಿನಗಳನ್ನು ನೆನಪು ಮಾಡಿಕೊಂಡರು. ಟೈ ಹಾಕಿಕೊಂಡು ಸಂತಸ ವ್ಯಕ್ತಪಡಿಸಿರುವ ಶಾಸಕ ದರ್ಶನ್ ಧ್ರುವನಾರಾಯಣ್ ರವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ.

