ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ದಲಿತ ನಾಯಕ ಶಾಸಕ ಹೆಚ್.ಸಿ ಮಹದೇವಪ್ಪಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಸಾಮೂಹಿಕ ರಾಜೀನಾಮೆಗೆ ಕೈ ನಾಯಕರು ಮುಂದಾಗಿದ್ದಾರೆ.

ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ಕೈ ನಾಯಕರು ಸಾಮೂಹಿಕ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಗೆ ಪತ್ರ ಬರೆಯಲಾಗಿದೆ.

ವಿವಿಧ ಘಟಕಗಳಲ್ಲಿ ಕೈ ನಾಯಕರು ಕೆಲಸ ಮಾಡುತ್ತಿದ್ದಾರೆ. ತಮ್ಮ ನಾಯಕನಿಗೆ ಸಚಿವ ಸ್ಥಾನ ಕೈ ತಪ್ಪಿದ ಬೆನ್ನಲ್ಲೇ ರಾಜೀನಾಮೆಗೆ ಮುಂದಾಗಿದ್ದಾರೆ.